ಅಪಘಾತ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್‌ಐಎ ಶಂಕಿತ ವ್ಯಕ್ತಿಯ ಫೊಟೋ ಬಿಡುಗಡೆ ,ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆPublished
10 months agoon
By
Akkare Newsಮಂಗಳೂರು(ಬೆಂಗಳೂರು): ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್‌ಐಎ ಶಂಕಿತ ವ್ಯಕ್ತಿಯ ಫೊಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಎನ್‌ಐಎ, ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಹೇಳಿದೆ. ಅಲ್ಲದೆ ಶಂಕಿತ ವ್ಯಕ್ತಿಯ ಸುಳಿವು ಸಿಕ್ಕರೆ 08029510900 ಮತ್ತು 8904241100 ನಂಬರ್ ಮಾಹಿತಿ ನೀಡಬಹುದು. ಅಲ್ಲದೆ, info.blr.nia@gov.in ಗೆ ಮೇಲ್ ಮೂಲಕವೂ ಮಾಹಿತಿ ನೀಡಬಹುದು. ಇನ್ನು ಸುಳಿವು ಕೊಟ್ಟವರ ಮಾಹಿತಿಯನ್ನ ಗೌಪ್ಯವಾಗಿ ಇಡಲಾಗುವುದೆಂದು ಎನ್‌ಐಎ ಸ್ಪಷ್ಟಪಡಿಸಿದೆ.