ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಲೋಕಸಭಾ ಚುನಾವಣೆ ಕಾಂಗ್ರೆಸ್ ಮೊದಲ ಪಟ್ಟಿ ಎರಡು ದಿನಗಳ ಒಳಗೆ ಬಿಡುಗಡೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಹಿನ್ನಲೆ ಇಂದು ಬಳ್ಳಾರಿಯಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಬಸವಕಲ್ಯಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದರು. ಕೆಲವರು ಅಂಬೇಡ್ಕರ್‌ರವರ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

ರಾಮೇಶ್ವರ ಕೆಫೆ ಬಾಂಬ್ ಸ್ಟೋಟ್ ಪ್ರಕರಣ ಆರೋಪಿ ಪತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ. ಆದರೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಬಾಂಬ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದ್ದಾರೆ.






ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟ‌ರ್ ಲೋಕಸಭೆ ಚುನಾವಣೆಗೆ ಸ್ಪರ್ಧೆ ಸಾಧ್ಯತೆ..!
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಹಲವು ತಂತ್ರಗಳನ್ನು ರೂಪಿಸುತ್ತಿರುವ ಬಿಜೆಪಿ, ಪ್ರಬಲ ಲಿಂಗಾಯತ ಸಮುದಾಯದಿಂದ ತನ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟ‌ರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

ಈ ಕುರಿತು ಸುಳಿವು ನೀಡಿದ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಬೊಮ್ಮಾಯಿ, ಶೆಟ್ಟರ್ ಸೇರಿದಂತೆ ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ನಡೆದಿದೆ. ಆದರೆ ಇನ್ನೂ ಅಂತಿಮವಾಗಿಲ್ಲ ಎಂದಿದ್ದಾರೆ.

ನಿನ್ನೆ, ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ನಾನು ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರಗಳ ಕುರಿತು ಚರ್ಚಿಸಿದ್ದೇವೆ. ಆದರೆ, ಇಲ್ಲಿಯವರೆಗೆ ಯಾವುದನ್ನೂ ಅಂತಿಮಗೊಳಿಸಿಲ್ಲ. ಪ್ರಧಾನಿಯೊಂದಿಗೆ ಚರ್ಚಿಸಿದ ನಂತರ ಅವರು ಕೆಲವು ತೀರ್ಮಾನಕ್ಕೆ ಬರುತ್ತಾರೆ. ಮುಂದಿನ 2-3 ದಿನಗಳಲ್ಲಿ ಎಲ್ಲವನ್ನೂ ಅಂತಿಮಗೊಳಿಸಲಾಗುವುದು ಎಂದು ಮಾಜಿ ಸಿಎಂ ಹೇಳಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement