ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೊಳ್ತಿಗೆ ಗ್ರಾಮದಲ್ಲಿ 1.31 ಕೋಟಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಮಂದಿನ 4 ವರ್ಷದಲ್ಲಿ ಗ್ರಾಮಗಳ ಸಂಪೂರ್ಣ ಅಭಿವೃದ್ದಿ; ಅಶೋಕ್ ರೈPublished
10 months agoon
By
Akkare Newsಪುತ್ತೂರು: ಮುಂದಿನ 4 ವರ್ಷಗಳ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಅಭಿವೃದ್ದಿ ಕಾರ್ಯಗಳು ನಡೆಯಲಿದ್ದು ಸಂಪೂರ್ಣವಾಗಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ದಿ ಮಾಡಲಾಗುವುದು ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಕೊಳ್ತಿಗೆ ಗ್ರಾಮದಲ್ಲಿ 1.31 ಕೋಟಿ ರೂ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿಮಾತನಾಡಿದರು.
ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಜನತೆನೆಮ್ಮದಿಯಿಂದ ಇದ್ದಾರೆ. ವಿವಿಧ ಗ್ಯಾರಂಟಿಗಳ ಕಾರಣದಿಂದ ಖಾತೆಗೆ ತಿಂಗಳಿಗೆ ಕುಟುಂಬಕ್ಕೆ ತಲಾ 5000 ಹಣ ಜಮೆಯಾಗುತ್ತಿದೆ. ಗ್ಯಾರಂಟಿ ಯೋಜನೆಯಿಂದ ಅನೇಕ ಕುಟುಂಬಗಳು ಸ್ವಾವವಲಂಬಿ ಜೀವನ ನಡೆಸುತ್ತಿದ್ದಾರೆ. ಕಡು ಬಡತನದಲ್ಲಿರುವ ಕುಟುಂಬಗಳು ಇಸಿರುಬಿಡುವಂತಾಗಿದೆ.
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜನರಖಾತೆಗೆ ಹಣ ಜಮೆಯಾಗುತ್ತಿದೆ ಎಂದು ಹೇಳಿದರು. ಜನ ತೆಗೆ ಕಾಂಗ್ರೆಸ್ ಸರಕಾರ ಆಡಳಿತದಲ್ಲಿರಬೇಕು ಎಂಬ ಭಾವನೆ ಉಂಟಾಗಿದೆ,ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,ಮಾಜಿ ಜಿಪಂಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕೊಳ್ತಿಗೆ ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ, ಉಪಾಧ್ಯಕ್ಷರಾದ ಪ್ರಮೋದ್ ಕೆಎಸ್ ಉಪಸ್ಥಿತರಿದ್ದರು. ವಲಯಾಧ್ಯಕ್ಷರಾದ ವೆಂಕಟ್ರಮಣ ಕೆಎಸ್ ಸ್ವಾಗತಿಸಿ ವಂದಿಸಿದರು