ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಪುತ್ತೂರು: ಕುರಿಯ ಜಾಗದ ತಕರಾರು ಅಕ್ರಮ ಪ್ರವೇಶ ಮನೆ ಧ್ವಂಸ ಲಕ್ಷಾಂತರ ರೂ. ನಷ್ಟ ದೂರು ದಾಖಲು ಮನೆ ಕಳೆದುಕೊಂಡವರಿಗೆ ಪರಿಹಾರ ನೀಡುವಂತೆ ಗ್ರಾಮಸ್ಥರ ಒತ್ತಾಯ

Published

on

ಪುತ್ತೂರು:ಸಂಬಂಧಿಸಿದ ಯಾರೂ ಇಲ್ಲದ ಸಮಯ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಜೆಸಿಬಿಯಿಂದ ಹೆಂಚಿನ ಮಾಡಿನ ಮನೆಯೊಂದನ್ನು ಕೆಡವಿ ನಷ್ಟ ಉಂಟು ಮಾಡಿದ ಘಟನೆ ಮಾ.9ರ ಮಧ್ಯಾಹ್ನ ಕುರಿಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.




ಪುತ್ತೂರು ಆದರ್ಶ ಆಸ್ಪತ್ರೆ ಬಳಿಯಿರುವ ಹೊಟೇಲ್ ಶ್ರೀಲಕ್ಷ್ಮೀ ಇದರ ಮಾಲಕ, ಕುರಿಯ ಹೊಸಮಾರು ನಿವಾಸಿ ವಸಂತ ಪೂಜಾರಿ ಎಂಬವರು ಘಟನೆ ಕುರಿತು ಸಂಪ್ಯ ಪೊಲೀಸರಿಗೆ ದೂರು ನೀಡಿ. ನಮ್ಮ ಸ್ವಾಧೀನದಲ್ಲಿರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಮನೆಯೊಳಗೆ ಜೆಸಿಬಿ ನುಗ್ಗಿಸಿ ಮನೆಯನ್ನು ಕೆಡವಿ ಮನೆಯ ವಸ್ತುಗಳನ್ನೆಲ್ಲಾ ನಾಶ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.ಶಶಿಕಲಾ ರೈ,ಮತ್ತವರ ಮಗ ಉಜ್ವಲ್ ರೈ ಹಾಗೂ ಜೆಸಿಬಿ ಆಪರೇಟರ್ ವಿರುದ್ಧ ಅವರು ದೂರು ನೀಡಿದ್ದಾರೆ.ಪೊಲೀಸರು ಕಲಂ 447,448,427,34 ಐಪಿಸಿಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






ಲಕ್ಷಾಂತರ ರೂ.ಗಳ ಸೊತ್ತುನಾಶ:
ಘಟನೆಯಿಂದಾಗಿ ಮನೆಯ ಒಳಗೆ ಇದ್ದ ಗೃಹ ಬಳಕೆ ವಸ್ತುಗಳು ಸಂಪೂರ್ಣ ನಾಶವಾಗಿರುತ್ತವೆ.ರೂ.2.35 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಮನೆಯ ವಸ್ತುಗಳು ಹಾಗೂ ಬಟ್ಟೆಬರೆಗಳು ಸೇರಿ ಲಕ್ಷಾಂತರ ರೂ.ಮೌಲ್ಯದ ಸೊತ್ತುಗಳು ನಾಶವಾಗಿರುವುದಾಗಿ ವಸಂತ ಪೂಜಾರಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ವಸಂತ ಪೂಜಾರಿಯವರ ಪತ್ನಿ ಅಸ್ವಸ್ಥರಾಗಿ ಮಂಗಳೂರು ಫಾ। ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಅಲ್ಲಿ ಚೇತರಿಸಿಕೊಂಡ ಅವರು ಪಂಜದಲ್ಲಿ ತವರು ಮನೆಯದ್ದರು.ಮಾ.8ರಂದು ವಸಂತ ಪೂಜಾರಿಯವರು ಹೆಂಡತಿಯ ತವರು ಮನೆ ಪಂಜಕ್ಕೆ ಹೋಗಿದ್ದರು.ಮಾ.9ರಂದು, ಕುರಿಯಲ್ಲಿದ್ದ ಅವರ ಮನೆಯನ್ನು ಕೆಡವಲಾಗಿದೆ.ಕಳೆದ ಕೆಲವು ಸಮಯಗಳಿಂದ ಇವರ ಹೊಟೇಲ್ ವ್ಯವಹಾರವೂ ಸ್ಥಗಿತಗೊಂಡಿದ್ದು,ಮಾ.11ರಂದು ಹೊಟೇಲ್ ಪುನರಾರಂಭಿಸುವುದಾಗಿ ಸ್ಥಳೀಯರಲ್ಲಿ ಹೇಳಿಕೊಂಡಿದ್ದರು. ಈ ಮಧ್ಯೆ ಮನೆ ಕೆಡವಿರುವ ಘಟನೆ ಅವರಿಗೆ ಮತ್ತೊಂದು ಆಘಾತ ಉಂಟು ಮಾಡಿದೆ ಎಂಬ ಮಾತು ಅವರ ಆಪ್ತ ವಲಯದಿಂದ ಕೇಳಿ ಬರುತ್ತಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version