Published
10 months agoon
By
Akkare Newsಪುತ್ತೂರು ಮಾ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ಭಾನವಾರ ಸಂಜೆ ನಡೆದಿದೆ.ಕಾರಿನಲ್ಲಿದ್ದ ಗುಲಾಬಿ (55) ಮತ್ತು ಕೃಷ್ಣಪ್ಪ ನಾಯ್ಕ (60) ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇವರೆಲ್ಲ ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು.
ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕ್ ಗೆ ಸೈಡ್ ಕೊಡಲು ಹೋದಾಗ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.