ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

‘ಸ್ವಕ್ಷೇತ್ರದಲ್ಲಿ ನನಗೆ ಟಿಕೆಟ್ ತಪ್ಪಿಸಲು ಬಹುದೊಡ್ದ ಪಿತೂರಿ ನಡೆಯುತ್ತಿದೆ’ : ಶೋಭಾ ಕರಂದ್ಲಾಜೆ

Published

on

ಬೆಳಗಾವಿ, : “ಲೋಕಸಭೆ ಚುನಾವಣೆಯಲ್ಲಿ ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಹುದೊಡ್ದ ಪಿತೂರಿ ನಡೆಯುತ್ತಿದೆ” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, “ಪಿತೂರಿ ಮಾಡುವವರು ಮಾಡುತ್ತಿರುತ್ತಾರೆ, ಆದರೆ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ. ನನ್ನ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ನಮ್ಮ ನಾಯಕರು ಕಾರಣಗಳು, ನಾವು ಮಾಡಿದ ಕೆಲಸಗಳ ಬಗ್ಗೆ, ಇತರ ವಿಚಾರಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ವಿರೋಧದಿಂದ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳಿ ಸುಮ್ಮನಾಗುತ್ತಿದ್ದರು” ಎಂದು ಹೇಳಿದ್ದಾರೆ.






“ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕಿದಾಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಭರವಸೆ ವ್ಯಕ್ತ

Continue Reading
Click to comment

Leave a Reply

Your email address will not be published. Required fields are marked *

Advertisement