ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆPublished
9 months agoon
By
Akkare Newsಪುತ್ತೂರು: ರಾಜ್ಯ ರಾಜಕೀಯವೇ ಹಿಂದಿರುಗಿ ನೋಡುವಂತೆ ಮಾಡಿದ್ದ ಪುತ್ತೂರು ರಾಜಕೀಯದ ಬಿರುಗಾಳಿ ಶಮನವಾಗುವ ಕಾಲ ಸನ್ನಿಹಿತವಾಗಿದೆ.ಇದೀಗ ಬಂದ ಮಾಹಿತಿಯಂತೆ, ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದಂತಾಗಿದೆ.
ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರ ಹೆಸರು ಘೋಷಣೆ ಆಗುತ್ತಿದ್ದಂತೆ, ಪುತ್ತಿಲ ಪರಿವಾರದ ವಿರೋಧ ಶಮನವಾದಂತಾಗಿದೆ. ಇದರ ಬೆನ್ನಲ್ಲೇ ಅಂದರೆ ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಪುತ್ತೂರು ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್ ಅವರು ಅರುಣ್ ಕುಮಾರ್ ಪುತ್ತಿಲ ಅವರನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜೊತೆ ಮಾತುಕತೆ ನಡೆದು, ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸಲಾಯಿತು.