ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Published

on

ಪುತ್ತೂರು: ರಾಜ್ಯ ರಾಜಕೀಯವೇ ಹಿಂದಿರುಗಿ ನೋಡುವಂತೆ ಮಾಡಿದ್ದ ಪುತ್ತೂರು ರಾಜಕೀಯದ ಬಿರುಗಾಳಿ ಶಮನವಾಗುವ ಕಾಲ ಸನ್ನಿಹಿತವಾಗಿದೆ.ಇದೀಗ ಬಂದ ಮಾಹಿತಿಯಂತೆ, ಅರುಣ್ ಕುಮಾರ್ ಪುತ್ತಿಲ ಅವರು ಇದೀಗ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದಂತಾಗಿದೆ.







ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರ ಹೆಸರು ಘೋಷಣೆ ಆಗುತ್ತಿದ್ದಂತೆ, ಪುತ್ತಿಲ ಪರಿವಾರದ ವಿರೋಧ ಶಮನವಾದಂತಾಗಿದೆ. ಇದರ ಬೆನ್ನಲ್ಲೇ ಅಂದರೆ ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಪುತ್ತೂರು ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್ ಅವರು ಅರುಣ್ ಕುಮಾರ್ ಪುತ್ತಿಲ ಅವರನ್ನು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜೊತೆ ಮಾತುಕತೆ ನಡೆದು, ಅರುಣ್ ಕುಮಾರ್ ಪುತ್ತಿಲ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸಲಾಯಿತು.

Continue Reading
Click to comment

Leave a Reply

Your email address will not be published. Required fields are marked *

Advertisement