ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಸಹಾಯ ಕೇಳಲು ಹೋಗಿದ್ದಾಗ ಕಿರುಕುಳ, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ; ಯಡಿಯೂರಪ್ಪ ವಿರುದ್ಧ ಎಫ್‌ಐಆ‌ರ್

Published

on

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.






ಸಂತ್ರಸ್ತೆ ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಪೋಕ್ಸೋ ಪ್ರಕರಣದಲ್ಲಿ ದಾಖಲಾದರೆ, ಆರೋಪಿ ಎಷ್ಟೇ ಪ್ರಭಾವಿ ಆಗಿದ್ದರೂ ಕೂಡಲೇ‌ ಬಂಧಿಸಬೇಕು. ನಂತರ ತನಿಖೆ‌ ನಡೆಸಬೇಕೆಂದು ಕಾನೂನಿನಲ್ಲಿ ಹೇಳಿರುವುದಾಗಿ ತಜ್ಞರು ಹೇಳುತ್ತಾರೆ. ಹೀಗಾಗಿ, ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಗಳಿವೆ.ಯಡಿಯೂರಪ್ಪನವರು ಬಿಜೆಪಿಯ ಸಂಸದೀಯ ಮಂಡಲಿ ಸದಸ್ಯರಾಗಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version