Published
9 months agoon
By
Akkare Newsಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ.
ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.
ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಹೊಂದಿರದ, ಕನಿಷ್ಠ ಟಿಕೆಟ್ಗಾಗಿ ಅರ್ಜಿಯನ್ನೂ ಸಲ್ಲಿಸದ ಇವರಿಗೆ ಟಿಕೆಟ್ ನೀಡಿದರೆ ಪಕ್ಷದ ಕಾರ್ಯಕರ್ತರು ಬಂಡಾಯವೇಳ ಬಹುದು ಎನ್ನುವ ಕಾರಣಕ್ಕೆ ಇವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗಿತ್ತು. ಇದೀಗ ಚುನಾವಣಾ ಹೊತ್ತಿನಲ್ಲೇ ಆರ್ ಪದ್ಮರಾಜ್ ಅವರನ್ನು ಪಕ್ಷ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಜನಾರ್ದನ ಪೂಜಾರಿಯವರ ಪ್ರೀತಿಯ ಶಿಷ್ಯನಾಗಿರುವ ಪದ್ಮರಾಜ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ.
ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಹೊಂದಿರದ, ಕನಿಷ್ಠ ಟಿಕೆಟ್ಗಾಗಿ ಅರ್ಜಿಯನ್ನೂ ಸಲ್ಲಿಸದ ಇವರಿಗೆ ಟಿಕೆಟ್ ನೀಡಿದರೆ ಪಕ್ಷದ ಕಾರ್ಯಕರ್ತರು ಬಂಡಾಯವೇಳ ಬಹುದು ಎನ್ನುವ ಕಾರಣಕ್ಕೆ ಇವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗಿತ್ತು.ಇದೀಗ ಚುನಾವಣಾ ಹೊತ್ತಿನಲ್ಲೇ ಆರ್ ಪದ್ಮರಾಜ್ ಅವರನ್ನು ಪಕ್ಷ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.