Published
9 months agoon
By
Akkare Newsಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹಿಂದೂ ಸಮಾಜದ ಏಳಿಗಾಗಿ ಸಂಘ ಪರಿವಾರದ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಟ ನಡೆಸಿದ್ದರು. ಗುರುವಾಯನಕೆರೆ ಹವ್ಯಕ ಭವನದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂತಾಜೆ ಅವರ ಆತ್ಮಕ್ಕೆ ಮೋಕ್ಷ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದವರು ಪ್ರಾರ್ಥಿಸಿದ್ದಾರೆ.