ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಸದಾನಂದ ಗೌಡರಿಗೆ ರಾಜ್ಯ” ಒಕ್ಕಲಿಗ ಸಂಘ” ಬೆಂಬಲ. ರಾಜ್ಯದಲ್ಲಿ ಒಕ್ಕಲಿಗರಿಗೆ ಸೀಟು ಹಂಚಿಕೆ ವಿಚಾರ. ಬಿಜೆಪಿ ವಿರುದ್ಧ ಸಿಡಿದೆದ್ದ ಸದಾನಂದ ಗೌಡರ ಮಹತ್ವದ ನಿರ್ಧಾರ ನಾಳೆ ಪ್ರಕಟ. “ಕೈ” ಹಿಡಿಯಲಿದ್ದಾರೆಯೇ ಡಿ. ವಿ.ಎಸ್. …..!!!?

Published

on

ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ.








ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Continue Reading
Click to comment

Leave a Reply

Your email address will not be published. Required fields are marked *

Advertisement