Published
9 months agoon
By
Akkare Newsಮಂಗಳೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಉಳ್ಳಾಲ ಮತ್ತು ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 7 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ.3ರಲ್ಲಿ ಕರ್ನಾಟಕ ಪೊಲೀಸರು ತಪಾಸಣೆ ನಡೆಸಲಿದ್ದು, ಒಂದರಲ್ಲಿ ಕರ್ನಾಟಕ ಮತ್ತು ಕೇರಳ ಪೊಲೀಸರು ಜಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಉಳಿದ ಮೂರು ಚೆಕ್‌ಪೋಸ್ಟ್‌ಗಳನ್ನು ಕೇರಳ ಪೊಲೀಸರು ನಿರ್ವಹಿಸಲಿದ್ದಾರೆ. ಪ್ರತೀ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು, ಕೇಂದ್ರ ಮೀಸಲು ಪಡೆಯ ಪೊಲೀಸರು ಸೇರಿದಂತೆ ನೋಡೆಲ್ ಅಧಿಕಾರಿಗಳು ಸಿಬಂದಿ ತಪಾಸಣೆ ನಡೆಸಲಿದ್ದಾರೆ.ಜಿಲ್ಲಾಧಿಕಾರಿ ಗಡಿಭಾಗದ ಚೆಕ್‌ಪೊಸ್ಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.