ಅಪಘಾತ ಅಭಿಪ್ರಾಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ ತಾಲೂಕಿನ ಕಾರೊಂದು ತುಮಕೂರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಪತ್ತೆ; ಸ್ಥಳಕ್ಕೆ ಆಗಮಿಸಿದ ಶ್ವಾನದಳ ಮತ್ತು FSL ತಂಡPublished
1 year agoon
By
Akkare Newsತುಮಕೂರು: ದ.ಕನ್ನಡ ಜಿಲ್ಲೆಗೆ ಸಂಭಂದಪಟ್ಟ ಕಾರೊಂದು ಕುಚ್ಚಂಗಿ ಕೆರೆಯ ಬಳಿ ಸಂಪೂರ್ಣ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾದ ಘಟನೆ ತುಮಕೂರಿನಿಂದ ವರದಿಯಾಗಿದೆ.ಈ ಒಂದು ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45), ಮದ್ದಡ್ಕ ನಿವಾಸಿ ಇಸಾಕ್(56), ಶಿರ್ಲಾಲ್ ನಿವಾಸಿ ಇಮ್ಮಿಯಾಝ್(34) ಎಂದು ಗುರುತಿಸಲಾಗಿದೆ.
ಇಂದು ಸಾರ್ವಜನಿಕರು ಕೆರೆಗೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ.
ಸ್ಥಳಕ್ಕೆ ಶ್ವಾನದಳ, ಎಫ್.ಎಸ್.ಎಲ್ ತಂಡ ಭೇಟಿ ಮೃತದೇಹಗಳನ್ನು ಗಮನಿಸಿದಾಗ ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದ್ದು ಇನ್ನು ಘಟನೆ ಸಂಬಂಧ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದು ಕಾರಿನಲ್ಲಿ ಪತ್ತೆಯಾಗಿರುವ ಮೃತದೇಹಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ