ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ಭರ್ಜರಿ ಬೇಟೆPublished
9 months agoon
By
Akkare Newsಬೆಳ್ತಂಗಡಿ : ನಿಷೇಧಿತ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಅಬಕಾರಿ ದಳದದವರು ಭರ್ಜರಿ ಭೇಟಿಯಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಜಿತೇಂದ್ರ ಜೈನ್ ಎಂಬವರ ಮಾಲೀಕತ್ವದ ವರ್ಧಮಾನ್ ಸ್ಟೋರ್ ನಲ್ಲಿ ನಿಷೇಧಿತ ಹೋಮ್ ಮೇಡ್ ವೈನ್ ನನ್ನು ಹೊರ ಜಿಲ್ಲೆಯಿಂದ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷ್ಮಣ್ ಉಪ್ಪಾರ್ ಮತ್ತು ತಂಡ ಮಾ.20 ರಂದು ಸಂಜೆ 4 ಗಂಟೆಗೆ ದಾಳಿ ಮಾಡಿದ್ದಾರೆ.
ದಾಳಿ ವೇಳೆ ಮಾರಾಟ ಮಾಡಲು ದಾಸ್ತಾನು ಮಾಡಿದ್ದ ನಿಷೇಧಿತ ಹೋಮ್ ಮೇಡ್ ವೈನ್ 306 ಲೀಟರ್ ವಶಪಡಿಸಿಕೊಂಡಿದ್ದು. ಇದರ ಮೌಲ್ಯ ಸುಮಾರು 2,01,960 ಲಕ್ಷ ರೂಪಾಯಿ ಅಗಿದ್ದು.ಆರೋಪಿ ನಿಡ್ಲೆ ಗ್ರಾಮದ ರವಿರಾಜ್ ಜೈನ್ ಮಗ ಜಿತೇಂದ್ರ ಜೈನ್ (46) ಎಂಬಾತನನ್ನು ಬಂಧಿಸಿ ಆತನ ವಿರುದ್ಧ ಬೆಳ್ತಂಗಡಿ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಅಬಕಾರಿ ದಳದ ಇನ್ಸ್ಪೆಕ್ಟರ್ ಲಕ್ಷಣ್ ಉಪ್ಪಾರ್, ಹೆಡ್ ಕಾನ್ಸ್‌ಟೇಬಲ್ ಬೋಜ ಕೆ, ವಿನಯ್ , ಶಿವಶಂಕರಪ್ಪ ಮತ್ತು ವಾಹನ ಚಾಲಕ ನವೀನ್ ಭಾಗವಹಿಸಿದರು.