Published
9 months agoon
By
Akkare Newsಬೆಂಗಳೂರು, ಮಾರ್ಚ್ 21: ಬರ, ಕುಡಿಯುವ ನೀರಿನ ಬಿಕ್ಕಟ್ಟಿನಿಂದ ತತ್ತರಿಸುತ್ತಿದ್ದ ರಾಜ್ಯದ ಹಲವಡೆ ಲಘು ಮಳೆಯಾಗಿದ್ದು, ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹವಾಮಾನ ಇಲಾಖೆ ಕೂಡ ದಕ್ಷಿಣ ಭಾರತದಲ್ಲಿ ಮಳೆಯಾಗುವ ಮುನ್ಸೂಚನೆಯನ್ನೇ ನೀಡಿದೆ. ಮಾರ್ಚ್ 25ರವರೆಗೆ ರಾಜ್ಯದ 23ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕೊಡಗು, ಮಂಡ್ಯ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ರಾಜ್ಯದ 23ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 25ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ…?
ಮಾರ್ಚ್ 22 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ, ಕೊಡಗು, ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ದಟ್ಟವಾಗಿದೆ.
ಕರ್ನಾಟಕದ ಕರಾವಳಿಯ ಎರಡು ಜಿಲ್ಲೆ, ಉತ್ತರ ಒಳನಾಡು ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ 15 ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮೂರು ದಿನ ಮಳೆ ಬರಲಿದೆ. ಬೆಂಗಳೂರಿನಲ್ಲಿ ಮಾರ್ಚ್ 22ರಂದು ನಗರದ ವಿವಿಧೆಡೆ ಸಾಮಾನ್ಯ ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.