ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ತುಮಕೂರು : ಬೆಳ್ತಂಗಡಿ ಮೂಲದ ಮೂವರ ಸಜೀವ ದಹನ ಪ್ರಕರಣ ಗೃಹ ಸಚಿವರನ್ನು ಭೇಟಿಯಾಗಿ ಸೂಕ್ತ ತನಿಖೆಗೆ ಅಗ್ರಹಿಸಿದ : ರಕ್ಷಿತ್ ಶಿವರಾಮ್Published
9 months agoon
By
Akkare Newsಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಗೃಹಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮಾ.24 ರಂದು ಸಂಜೆ ಭೇಟಿ ಮಾಡಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು.
ಅದಲ್ಲದೆ ಮೃತದೇಹದ ಡಿಎನ್ಎ ಪರೀಕ್ಷೆ ಮಾಡಿ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಈ ವೇಳೆ ತುಮಕೂರು ಪೊಲೀಸ್ ಅಧಿಕಾರಿಯನ್ನು ಗೃಹ ಸಚಿವರು ಕರೆ ಮಾಡಿ ಕರೆಸಿಕೊಂಡು ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ಪೊಲೀಸ್ ಅಧಿಕಾರಿ ಪ್ರಕರಣದ ಎಲ್ಲಾ ಮಾಹಿತಿಯನ್ನು ವಿವರಿಸಿದ್ದು. ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು. ಇನ್ನೂ ಎರಡು ದಿನದಲ್ಲಿ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಡಿ ತಿಳಿಸಲಾಗುವುದು ಎಂದು ಹೇಳಿದರು.
ತುಮಕೂರು ಎಡಿಷನ್ ಎಸ್ಪಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ವೇಳೆ ದ.ಕ.ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫರ್ನಾಂಡೀಸ್ ಮತ್ತು ಬೆಳ್ತಂಗಡಿ ಕಾಂಗ್ರೆಸ್ ಯೂತ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹಕಿಂ ಕೊಕ್ಕಡ ಜೊತೆಯಲ್ಲಿದ್ದರು.