Published
2 years agoon
By
Akkare News
ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಹೊರ ರಾಜ್ಯದ ಕೂಲಿ ಕಾರ್ಮಿಕರ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆದ ಘಟನೆ ಮಾ.25ರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಬ್ಲಡ್ ಮಾದರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.







ಇದರಿಂದ ಓರ್ವ ಗಾಯಗೊಂಡಿದ್ದು ಆತನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.