ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ : ಮೊದಲ ದಿನವೇ ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ 42 ವಿದ್ಯಾರ್ಥಿಗಳು ಗೈರು.

Published

on

2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಮಾ.25ರಂದು ಪ್ರಾರಂಭಗೊಂಡಿದ್ದು ಮೊದಲ ದಿನ ಪ್ರಥಮ ಭಾಷಾ ಪರೀಕ್ಷೆ ನಡೆದಿದೆ.

ಪ್ರಥಮ ದಿನದ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಒಟ್ಟು 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ.







ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ತೆರೆಯಲಾಗಿರುವ 13 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿರುತ್ತದೆ. ಈ ಪೈಕಿ ಕೊಂಬೆಟ್ಟು ಸ.ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ-3, ದರ್ಬೆ ಸಂತ ಫಿಲೋಮಿನಾ ಪ್ರೌಢಶಾಲೆ-1, ಉಪ್ಪಿನಂಗಡಿ ಸ.ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗ-5, ಸಂತ ವಿಕ್ಟರಣ ಬಾಲಿಕ ಪ್ರೌಢಶಾಲೆ-1, ಕಡಬ ಸರಕಾರಿ ಪ್ರೌಢಶಾಲೆ-3, ನೆಲ್ಯಾಡಿ ಸೈಂಟ್ ಜಾರ್ಜ್ ಪ್ರೌಢಶಾಲೆ-1, ರಾಮಕುಂಜದ ಶ್ರೀರಾಮಕುಂಜೇಶ್ವರ ಪ್ರೌಢಶಾಲೆ-2, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ-6, ಸವಣೂರು ವಿದ್ಯಾರಶ್ಮೀ ಪ್ರೌಢಶಾಲೆ-6, ಈಶ್ವರಮಂಗಲ ಗಜಾನನ ಪ್ರೌಢಶಾಲೆ-7 ಹಾಗೂ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪರೀಕ್ಷಾ ಕೇಂದ್ರದಲ್ಲಿ 6 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ.

ಗೈರಾಗಿರುವ ಒಟ್ಟು ವಿದ್ಯಾರ್ಥಿಗಳಲ್ಲಿ 28 ಮಂದಿ ಹೊಸದಾಗಿ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಹಾಗೂ 14 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version