ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

Published

on

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್‌ಭಾಗ್‌ನಲ್ಲಿ ಉದ್ಘಾಟನೆಗೊಂಡಿತು.

ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಜನಾರ್ಧನ್ ಪೂಜಾರಿ ‘ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗ್ಯ ಅಭ್ಯರ್ಥಿಯನ್ನು ನಿಲ್ಲಿಸಿದ್ದಾರೆ. ಇನ್ನು ದೇವರ ಕೈಯಲ್ಲಿದೆ. ದೇವರು ನಮ್ಮ ಹಿಂದೆ ಇದ್ದಾರೆ. ಈ ಬಾರಿ ಪದ್ಮರಾಜ್ ಗೆಲುವು ಖಂಡಿತಾ” ಎಂದು ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪ್ರಚಾರಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳ ಮುಂದೆ ಮಾತಾಡಿದ ಅವರು, ‘ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಈ ಬಾರಿ ಗೆಲುವು ದಾಖಲಿಸುತ್ತಾರೆ. ಯುವಕನಿಗೆ ಪಕ್ಷ ಟಿಕೆಟ್ ನೀಡಿರುವುದು ಸಂತಸದ ವಿಚಾರ” ಎಂದರು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ತಾರೆ ಪ್ರತಿಭಾ ಕುಳಾಯಿ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ,







ವಿಜಯ ಕುಮಾ‌ರ್ ಶೆಟ್ಟಿ ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಳಿಕ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version