ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಏ.3 ರಂದು ದ.ಕ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಬೃಹತ್ ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಕೆ

Published

on

ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಏಪ್ರಿಲ್ 3ರಂದು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ದ.ಕ. ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಪ್ರಚಾರ ಕಾರ್ಯಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದರು.

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು ಏ.11ರಂದು ಸುಳ್ಯ. 12ರಂದು ಮುಲ್ಕಿ, 13ರಂದು ಪುತ್ತೂರು, 14ರಂದು ಮಂಗಳೂರು ದಕ್ಷಿಣ, 15ರಂದು ಉಳ್ಳಾಲ, 16ರಂದು ಮಂಗಳೂರು ಉತ್ತರ 17ರಂದು ಬೆಳ್ತಂಗಡಿ, 18ರಂದು ಬಂಟ್ವಾಳಕ್ಕೆ ಅಭ್ಯರ್ಥಿ ಸಹಿತ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದರು.ಏ.19ರಿಂದ ಎರಡನೇ ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. ಮಾ. 24ಕ್ಕೆ ಪ್ರಚಾರ ಕಾರ್ಯ ಅಂತ್ಯವಾಗಲಿದ್ದು, 26ರಂದು ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.







ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಚುನಾವಣಾ ಉಸ್ತುವಾರಿ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿದರು. ಅಭ್ಯರ್ಥಿ ಪದ್ಮರಾಜ್ ಆರ್.. ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಪ್ರಮುಖರಾದ ಯು.ಕೆ. ಮೋನು, ಶಾಹುಲ್ ಹಮೀದ್ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement