Published
9 months agoon
By
Akkare Newsಮೈಸೂರು : ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ ಕೆಲಸ ನಡೆಯುತ್ತಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.
ಇಲ್ಲಿ ಬುಧವಾರ ನಡೆದ ಮುಖಂಡರ ಪಕ್ಷ ಸೇರ್ಪಡೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ಮಾಧ್ಯಮವನ್ನೂ ಅವರ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.
ಬಿಜೆಪಿಯವರ ವಿರುದ್ಧ ಮಾತನಾಡಲಾಗದಂತೆ, ಪ್ರಶ್ನಿಸಿ ಬರೆಯಲಾಗದಂತೆ ಮಾಡಿದ್ದಾರೆ. ಭಯದ ವಾತಾವರಣ ಸೃಷ್ಟಿಸಿದ್ದಾರೆ’ ಎಂದು ಆರೋಪಿಸಿದರು.