ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ರಾಜಕೀಯ ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣ ; ಮೃತ ದೇಹಗಳು ಇಂದು ಸ್ವ ಕ್ಷೇತ್ರ ಬೆಳ್ತಂಗಡಿ ಗೆPublished
9 months agoon
By
Akkare Newsಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣದ ಮೃತ ದೇಹಗಳು ಇಂದು ಸ್ವ ಕ್ಷೇತ್ರ ಬೆಳ್ತಂಗಡಿಯ ಮನೆಗಳಿಗೆ ತಲುಪಿದುವು.
ಮೃತ ದೇಹಗಳಿಗೆ ಸಂಬಂಧಿಸಿದಂತೆ ಡಿಎನ್‌ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹಗಳು ಮನೆಯವರಿಗೆ ಹಸ್ತಾಂತರ ಮಾಡಲಾಗಿತ್ತು.
ಮಾ.29 ರಂದು ಶುಕ್ರವಾರ ಬೆಳಗ್ಗೆ ಮೃತದೇಹ ಮನೆಗೆ ತಲುಪಿದೆ.ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ ಎಂದು ತಿಳಿದು ಬಂದಿದೆ.
ನಡ ಗ್ರಾಮದ ಟಿ.ಬಿ. ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್ ಹಮೀದ್, ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ ಮತ್ತು ಶಿರ್ಲಾಲು ಗ್ರಾಮದ ಸಿದ್ದೀಕ್ ಯಾನೆ ಇಮ್ತಿಯಾಝ್ ಎಂಬವರ ಮೃತದೇಹಗಳು ಕೊಲೆಗೈದು ಕಾರು ಸಹಿತ ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಾ.22ರಂದು ತುಮಕೂರಿನ ಕುಚ್ಚಂಗಿ ಕೆರೆ ಎಂಬಲ್ಲಿ ಪತ್ತೆಯಾಗಿದ್ದವು. ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಎನ್ ಎ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಅದರ ವರದಿ ಬಂದಿರುವ ಕಾರಣ ಇದೀಗ ಮೂವರ ಮೃತದೇಹಗಳನ್ನು ಹಸ್ತಾಂತರಿಸಲಾಗಿದ್ದು, ಕೃತ್ಯ ಬೆಳಕಿಗೆ ಬಂದ ಏಳು ದಿನಗಳ ಬಳಿಕ ಅಂದರೆ ಇಂದು ಬೆಳಗ್ಗೆ ಉಜಿರೆಗೆ ತಲುಪಿವೆ. ಶಾಹುಲ್ ಹಮೀದ್ ಹಾಗೂ ಇಸಾಕ್ ಅವರ ಮೃತದೇಹಗಳನ್ನು ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸೀದಿಗೆ ಹಾಗೂ ಸಿದ್ದೀಕ್ ಅವರ ಮೃತದೇಹವನ್ನು ಶಿರ್ಲಾಲು ಮಸೀದಿಗೆ ತಂದು ಅಲ್ಲಿ ಅಂತಿಮ ದರ್ಶನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಊರಿಗೆ ಊರೆ ಅಲ್ಲಿ ಸೇರಿತ್ತು.. ವೃದ್ದರು, ಮಹಿಳೆಯರು ಸೇರಿದಂತೆ ಸಾವಿರಾರು ಜನ ಪಾಲ್ಗೊಂಡಿದ್ದರು.