ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Published

on

ಸುಳ್ಯ: ಸುಳ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಕೆವಿಜಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದರು.
ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಅಭಿವೃದ್ಧಿಗೆ ವಿಫುಲ‌ ಅವಕಾಶಗಳಿವೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿ ಪಡಿಸುವುದು. ಜಿಲ್ಲೆಯನ್ನು ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸುವುದು ನಮ್ಮ ಗುರಿ ಮತ್ತು ಆಶಯ ಎಂದರು.




ಈ ಹಿಂದೆ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕಾಂಗ್ರೆಸ್ ಪ್ರತಿನಿಧಿಗಳು ಜಿಲ್ಲೆಯಲ್ಲಿ ರೈಲ್ವೇ, ವಿಮಾನ ನಿಲ್ದಾಣ, ಎಂಆರ್‌ಪಿಎಲ್, ಎಂಸಿಎಫ್ ಸೇರಿದಂತೆ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಆದರೆ ಕಳೆದ ಮೂರು ದಶಕಗಳಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ಆ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿ ಜಿಲ್ಲೆಯ ಅಭಿವೃದ್ಧಿಯನ್ನು, ಜಿಲ್ಲೆಯ ಹಿರಿಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿಸುವ ಕನಸು ಇದೆ ಎಂದು ಅವರು ಹೇಳಿದರು.

ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಡಾ.ಕುರುಂಜಿ ವೆಂಕಟ್ರಮಣ ಗೌಡ ಅವರ ಸಾಧನೆ ಅನನ್ಯವಾದುದು. ಅವರ ಕೆಲಸ ಇತರರಿಗೆ ಸ್ಪೂರ್ತಿ ಎಂದು ಅವರು ಹೇಳಿದರು.

ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಐವನ್ ಡಿಸೋಜ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿಧಾನಸಭಾ ಚುನಾವಣಾ ಅಭ್ಯರ್ಥಿ ಜಿ.ಕೃಷ್ಣಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಪಿ.ಎಸ್.ಗಂಗಾಧರ, ಗೀತಾ ಕೋಲ್ಚಾರ್, ರಾಧಾಕೃಷ್ಣ ಬೊಳ್ಳೂರು, ಜಿ.ಕೆ. ಹಮೀದ್ ಗೂನಡ್ಕ,







ರಹೀಂ ಬೀಜದಕಟ್ಟೆ, ಎಸ್.ಕೆ.ಹನೀಫ, ಮಹೇಶ್ ಕುಮಾರ್ ಕರಿಕ್ಕಳ, ಮಹಮ್ಮದ್ ಕುಂಞಿ ಗೂನಡ್ಕ, ವಿಜಯ ಕುಮಾರ್ ಸೊರಕೆ, ಕೆ.ಎಂ.ಮುಸ್ತಫ, ಅಬ್ದುಲ್ ಗಫೂರ್ ಕಲ್ಮಡ್ಕ, ಶೌವಾದ್ ಗೂನಡ್ಕ, ಸಂಶುದ್ದೀನ್, ಪಿ.ಎ.ಮಹಮ್ಮದ್, ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್, ಶರೀಫ್ ಕಂಠಿ, ಸಿದ್ದಿಕ್‌ ಕೊಕ್ಕೊ ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಲೀಲಾ ಮನಮೋಹನ, ಪ್ರವೀಣ ಮರುವಂಜ, ಸುಜಯಾ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಕೆ.ವಿ, ವಿವಿಧ ಕೆವಿಜಿ ಶಿಕ್ಷಣ‌ ಸಂಸ್ಥೆಗಳ ಪ್ರಾಂಶುಪಾಲರುಗಳು ಹಾಗೂ ಪ್ರಮುಖರಾದ ಚಿದಾನಂದ ಕೆ, ಅರುಣ್ ಕುಮಾರ್, ಶ್ರೀಧರ, ದಿನೇಶ್ ಮಡ್ತಿಲ, ಬಿ.ಟಿ. ಮಾಧವ, ಪ್ರಸನ್ನ ಕಲ್ಲಾಜೆ, ಭವಾನಿಶಂಕರ ಅಡ್ತಲೆ, ನಾಗೇಶ್ ಕೊಚ್ಚಿ,
ಕಮಲಾಕ್ಷ ನಂಗಾರು ಮತ್ತಿತರರು ಸೇರಿ ಸ್ವಾಗತಿಸಿದರು.

ಕೆವಿಜಿ ಅಮರಜ್ಯೋತಿ ಕಾಲೇಜು ಪ್ರಾಂಶುಪಾಲೆ ಡಾ. ಯಶೋಧಾ ರಾಮಚಂದ್ರ ಸ್ವಾಗತಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement