ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
3 months agoon
By
Akkare Newsಕಡಬ, ಮಾ.31. ಅಕ್ರಮ ದನ ಸಾಗಾಟದ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಕಾರಣರಾದ ಇಬ್ಬರು ಆರೋಪಿಯನ್ನು ಕಡಬ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂಬವರು ಶನಿವಾರ ರಾತ್ರಿ ವೇಳೆಗೆ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ಅಕ್ರಮ ದನ ಸಾಗಾಟ ಮಾಡುತ್ತಿದ್ದ ಮಾರುತಿ 800 ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ವಿಠಲ ರೈಯವರು ಸ್ಥಳದಲ್ಲೇ ಮೃತಪಟ್ಟಿದ್ದರು. ಆರೋಪಿಯು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ| ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದರು. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದರು.
ವಿಷಯ ತಿಳಿದು ಹಿಂದೂ ಪರ ಸಂಘಟನೆಗಳು ತಡರಾತ್ರಿ ವೇಳೆಗೆ ಕಡಬದಲ್ಲಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಲ್ಲದೆ, ಎಸ್ಪಿ ಸ್ಥಳಕ್ಕಾಗಮಿಸುವಂತೆ ಪಟ್ಟು ಹಿಡಿದಿದ್ದರು. ಸ್ಥಳಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಹಿಂದೂ ಮುಖಂಡ ಅರುಣ್ ಪುತ್ತಿಲ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಮೊದಲಾದವರು ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸಾಥ್ ನೀಡಿದ್ದರು.
ರಾತ್ರಿ ವೇಳೆಗೆ ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಪ್ರತಿಭಟನಾಕಾರರ ಜೊತೆ ಮಾತನಾಡಿ, ಆರೋಪಿಗಳನ್ನು ಬಂಧಿಸುವ ಬಗ್ಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಲಾಗಿತ್ತು. ಆರೋಪಿಗಳ ಬಂಧನಕ್ಕೆ ಭಾನುವಾರ ಮಧ್ಯಾಹ್ನದ ಗಡುವು ನೀಡಲಾಗಿತ್ತು. ಈ ನಡುವೆ ಬೆಳಗ್ಗಿನ ಜಾವ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದು, ಈ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಾಗಿದೆ.