ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಎ.3ರಂದು ಬೆಳಗ್ಗೆ 11ಗಂಟೆಗೆ ನಾಮಪತ್ರ ಸಲ್ಲಿಕೆPublished
9 months agoon
By
Akkare Newsಮಂಗಳೂರು, ಎ.1: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಎ.3ರಂದು ಬೆಳಗ್ಗೆ 11ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ತಿಳಿಸಿದ್ದಾರೆ.
ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾಮಪತ್ರ ಸಲ್ಲಿಸುವ ಮೊದಲು ಚರ್ಚ್, ಮಸೀದಿ, ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ನಾಮಪತ್ರ ಸಲ್ಲಿಸುವ ಮುನ್ನ ಬೆಳಗ್ಗೆ 9:30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಹೊರಡುವ ಮೆರವಣಿಗೆಯು ಅಳಕೆ, ನ್ಯೂಚಿತ್ರಾ ಟಾಕೀಸ್, ಉಷಾ ಕಿರಣ್ ಹೋಟೆಲ್ (ಎಡ),ಟೆಂಪಲ್ ಸ್ಕ್ವಾರ್, ಜಿಎಚ್‌ಎಸ್ ರೋಡ್(ಬಲ), ಗಣಪತಿ ಹೈಸ್ಕೂಲ್ ರಸ್ತೆ, ಓಲ್ಡ್ ಐಡಿಯಲ್ ಪಾರ್ಲರ್, ಮಂಗಳೂರು ವಿವಿ ಕಾಲೇಜು ರೋಡ್, ಕ್ಲಾಕ್ ಟವರ್, ಟೌನ್ ಹಾಲ್ ರಸ್ತೆಯ ಮೂಲಕ ಆಗಮಿಸಿ ಎ.ಬಿ. ಶೆಟ್ಟಿ ಸರ್ಕಲ್ ಬಳಿ ಸಮಾವೇಶಗೊಳ್ಳಲಿದೆ. ಅಲ್ಲಿಂದ ಚುನಾವಣಾಧಿಕಾರಿ ಕಚೇರಿಗೆ ತೆರಳಿ ಪದ್ಮರಾಜ್ ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಸುವ ವೇಳೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಪಾಲಿಸಲಾಗುವುದು ಎಂದರು.
ಪದ್ಮರಾಜ್ ಅವರು ಕಾಂಗ್ರೆಸ್ ಪಕ್ಷದ ಎಲ್ಲರ ಒಮ್ಮತದ ಅಭ್ಯರ್ಥಿ. ಇದರಲ್ಲಿ ಯಾವುದೇ ಭಿನ್ನಭಿಪ್ರಾಯ ಇಲ್ಲ ಎಂದು ಮಾಜಿ ಸಚಿವ ರೈ ಸ್ಪಷ್ಟಪಡಿಸಿದರು.
ಕಾಂಗ್ರೆಸ್‌ನ ಸಂಸದರಿಂದ ಅಭಿವೃದ್ಧಿಗೆ ದೊಡ್ಡ ಕೊಡುಗೆ: ಕಾಂಗ್ರೆಸ್‌ನಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಇಲ್ಲಿನ ಸಂಸದರು ಜಿಲ್ಲೆಯ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಬೆನೆಗಲ್ ಶಿವರಾವ್, ಯು.ಶ್ರೀನಿವಾಸ ಮಲ್ಯ, ಆಸ್ಕರ್ ಫೆರ್ನಾಂಡಿಸ್, ಜನಾರ್ದನ ಪೂಜಾರಿ ಮತ್ತಿತರ ನಾಯಕರ ಕೊಡುಗೆಯನ್ನು ಯಾವತ್ತೂ ಮರೆಯುವಂತಿಲ್ಲ. ಜಿಲ್ಲೆಯ ಅಭಿವೃದ್ಧಿಗೆ ಪ್ರಥಮ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಕೊಡುಗೆ ಅನನ್ಯ ಎಂದರು.
ಬಿಜೆಪಿ ಸಂಸದರಿಂದ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ಏನೂ ಇಲ್ಲ. ದಕ್ಷಿಣ ಕನ್ನಡದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ರನ್ನು ಅಭಿವೃದ್ಧಿ ಕಾರ್ಯಗಳಲ್ಲಿ ನಂ.1 ಸಂಸದ, ಕೋಟಿಗಟ್ಟಲೆ ಅನುದಾನವನ್ನು ಕೇತ್ರದ ಅಭಿವೃದ್ಧಿಗೆ ತಂದಿದ್ದಾರೆ ಎಂದು ಅವರ ಪಕ್ಷದವರು ಹೇಳುತ್ತಿದ್ದಾರೆ. ಅವರು ಅಷ್ಟೊಂದು ಅಭಿವೃದ್ಧಿ ಮಾಡಿದ್ದರೆ ಅವರಿಗೆ ಯಾಕೆ ಟಿಕೆಟ್ ನಿರಾಕರಿಸಲಾಯಿತು ಎಂದು ರಮಾನಾಥ ರೈ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ ಮತ್ತು ಮಹಾಬಲ ಮಾರ್ಲ,ಪಕ್ಷದ ಧುರೀಣರಾದ ಇಬ್ರಾಹೀಂ ಕೊಡಿಜಾಲ್, ಮಿಥುನ್ ರೈ, ನವೀನ್ ಡಿ ಸೋಜ, ಬಿ ಎಲ್ ಪಿ ಪದ್ಮನಾಭ, ಅಶೋಕ್ ಡಿ ಕೆ, ರಮಾನಂದ ಪೂಜಾರಿ, ಟಿ ಕೆ ಸುಧೀರ್, ಜಯಶೀಲಾ ಅಡ್ಯಂತಾಯ, ನಝೀರ್ ಬಜಾಲ್, ಶಬೀರ್ ಸಿದ್ದಕಟ್ಟೆ ಉಪಸ್ಥಿತರಿದ್ದರು.