Published
9 months agoon
By
Akkare Newsಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಬುಧವಾರ ನಾಮ ಪತ್ರ ಸಲ್ಲಿಸಿದರು.
ಬುಧವಾರ ಬೆಳಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು,ಕಾರ್ಯಕರ್ತರು,ಅಭಿಮಾನಿಗಳೊಂದಿಗೆ ಪದ್ಮರಾಜ್ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಡಾ.ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ ಅಶೋಕ್ ಕುಮಾರ್ ರೈ ಮಾಜಿ ಶಾಸಕ ಜೆ.ಆರ್.ಲೋಬೊ ಮತ್ತಿತರರು ಉಪಸ್ಥಿತರಿದ್ದರು.