Connect with us

ಇಂದಿನ ಕಾರ್ಯಕ್ರಮ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

Published

on

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಎ.4ರಂದು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಉಪಸ್ಥಿತರಿದ್ದರು.ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ನಡೆಯಿತು.




ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version