ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ; ತೀರ್ಥಹಳ್ಳಿಯ ಬಿಜೆಪಿ ನಗರ ಘಟಕದ ಮುಖಂಡನ ಎನ್.ಐ.ಎ. ವಿಚಾರಣೆ

Published

on

ಶಿವಮೊಗ್ಗ, ಎ.5: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತೀರ್ಥಹಳ್ಳಿಯಲ್ಲಿ ಬಿಜೆಪಿ ನಗರ ಘಟಕದ ಮುಖಂಡನನ್ನು ಎನ್.ಐ.ಎ. ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ 10 ದಿನಗಳ ಹಿಂದೆ ಮುಂಜಾನೆ ಎನ್ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.





ಅದರ ಬೆನ್ನಲ್ಲೇ ತೀರ್ಥಹಳ್ಳಿಯ ಬಿಜೆಪಿಯ ಘಟಕದ ಮುಖಂಡನನ್ನು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದ ಎನ್ಐಎ ತಂಡ ಈ ಹುಡುಗರ ಜೊತೆ ಬಿಜೆಪಿ ನಗರ ಘಟಕದ ಮುಖಂಡನಿಗೆ ಸಂಪರ್ಕ ಇದ್ದ ಕಾರಣ ಆತನನ್ನು ವಿಚಾರಣೆಗೆ ಒಳಪಡಿಸಿರಬಹುದು ಎಂದು ಹೇಳಲಾಗುತ್ತಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement