ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ವಿಟ್ಲ‌ಮುಡ್ನೂರು ಕಾಂಗ್ರೆಸ್ ಕಾರ್ಯಕರ್ತರ ಸಭೆ 5 ಗ್ಯಾರಂಟಿ ಪಾಲನೆ ಮಾಡಿ ಮನೆ ಬಾಗಿಲಿಗೆ ಬರುತ್ತಿದ್ದೇವೆ ಕಾಂಗ್ರೆಸ್ ಗೆ ಹರಸಿ: ಅಶೋಕ್ ರೈ

Published

on

ಪುತ್ತೂರು: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಯನ್ನು ನಿಮಗೆ ತಲುಪಿಸಿ, ನುಡಿದಂತೆ ನಡೆದು ಇದೀಗ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮನೆ ಬಾಗಿಲಿಗೆ ಬರುತ್ತಿದ್ದೇವೆ ಹರಸಿ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ವಿಟ್ಲ ಮುಡ್ನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಜನ ನೆಮ್ಮದಿಯಿಂದ ಇರಲು ಸಾಧ್ಯ. ಗೃಹಲಕ್ಣ್ಮಿ ಯೋಜನೆಯ ಎರಡು ಸಾವಿರ ಹಣ ಎಲ್ಲರ ಮನೆ ಬೆಳಗಿಸಿದೆ.‌ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಕುಟುಂಬಕ್ಕೆ ವಾರ್ಷಿಕ ಒಂದು ಲಕ್ಷ ಹಣ ನೀಡಲಿದ್ದೇವೆ ಎಂದು ಹೇಳಿದರು.

ದೇಶದ ಭದ್ರತೆಯ ಹಿತದೃಷ್ಟಿಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ.‌ ನಮ್ಮ ದೇಶದ ಭೂಭಾಗವನ್ನು ಚೀನಾ ಅತಿಕ್ರಮಿಸಿದೆ ಆದರೆ ಅದನ್ನು ಪ್ರಶ್ನಿಸುವ ತಾಕತ್ತು ಕೇಂದ್ರ ಪ್ರದರ್ಶಿಸಲಿಲ್ಲ. ಹಳೆಯದನ್ನು ಕೆದಕಿ ಜನರ ಭಾವನೆ ಕೆರಳಿಸುವ ಬದಲು ಇತ್ತೀಚೆಗೆ ಚೀನಾದವರು ಅಕ್ರಮಿಸಿಕೊಂಡಿರುವ ಭಾರತದ ಭೂಭಾಗವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಮುಧಾಗಬೇಕಿದೆ ಎಂದು ಹೇಳಿದರು.





ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಪಕ್ಷದ ಮುಖಂಡರು‌ಮಾಡಬೇಕಿದೆ. 5 ಗ್ಯಾರಂಟಿಯನ್ನು ಮನೆಗೆ ತಲುಪಿಸಿರುವ ನಾವು ವೋಟು ಕೇಳಲು ಅರ್ಹತೆಯನ್ನು ಹೊಂದಿದ್ದೇವೆ ಬಿಜೆಪಿ ಸರಕಾರ ಏನು ಕೊಡುಗೆ ನೀಡಿದೆ ಎಂಬುದನ್ನು ಪ್ರಶ್ನಿಸಬೇಕು. ಕೇವಲ ಹಿಂದೂ‌ಮುಸ್ಲಿಂ ವಿಚಾರ ಮುಂದಿಟ್ಟು ಮತ ಕೇಳುವ ಬಿಜೆಪಿಗೆ ಅಭಿವೃದ್ದಿ ವಿಚಾರವವೇ ಗೊತ್ತಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಗೆಲ್ಲಿಸಲು ಶ್ರಮವಹಿಸಿ: ಎಂ ಎಸ್
ಪದ್ಮರಾಜ್ ರಂಥ ಉತ್ತಮ ಅಭ್ಯರ್ಥಿಯನ್ನು ಕಾಂಗ್ರೆಸ್ ಜಿಲ್ಲೆಗೆ ನೀಡಿದೆ, ಅವರ ಗೆಲುವು ಅದು ಜಿಲ್ಲೆಯ ಜನತೆಯ ಗೆಲುವಾಗಲಿದೆ. ಜಿಲ್ಲೆಗೆ ಬೆಂಕಿ ಹಚ್ಚುವ ಮಾತನಾಡುತ್ತಿದ್ದ ಕಟೀಲ್ ರನ್ನು ಬಿಜೆಪಿಯೇ ಮೂಲೆಯಲ್ಲಿ ಕೂರಿಸಿದೆ. ಕಾಂಗ್ರೆಸ್ ಎಂದಿಗೂ ಜನರ ಜೀವನದ ಜೊತೆ ಚೆಲ್ಲಾಟವಾಡುವುದಿಲ್ಲ, ದೇಶದ ಅಭಿವೃದ್ದಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ ಹೇಳಿದರು.

ವೇದಿಕೆಯಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ‌ಬಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಡಿಸಿಸಿ ಕಾರ್ಯದರ್ಶಿ ನಝೀರ್‌ಮಠ, ಮುರಳೀಧರ್ ರೈ ಮಟಂತಬೆಟ್ಟು, ವಲಯ ಅಧ್ಯಕ್ಷ ಸುಮಂತ್ ಮೊದಲಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version