ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ - ಕಾಂಗ್ರೆಸ್ ಕಾರ್ಯಕರ್ತರ ಸಭೆ ಧರ್ಮದ ಹೆಸರಿನಲ್ಲಿ ಕಚ್ಚಾಡುತ್ತಿದ್ದರೆ ದೇಶದ ಭದ್ರತೆಗೆ ಅಪಾಯ ಇದೆ: ಅಶೋಕ್ ರೈPublished
9 months agoon
By
Akkare Newsಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ ಇರಬೇಕಿದೆ. ಧರ್ಮದ ಹೆಸರಿನಲ್ಲಿಮಾಡುವ ಕಚ್ಚಾಟವನ್ನು ನಿಲ್ಲಿಸಬೇಕು, ಯುವ ಜನತೆಯ ಕೈಗೆ ಉದ್ಯೋಗ ಕೊಡುವ ಕೆಲಸವನ್ನುಮಾಡಬೇಕಿದೆ. ಕಳೆದ ಹತ್ತು ವರ್ಷದಲ್ಲಿ ದೇಶ ಎತ್ತ ಸಾಗಿದೆ, ಇಲ್ಲಿ ಏನು ನಡೆಯುತ್ತಿದೆ ಎಂಬ ಆತಂಕಕಾರಿ ವಿಚಾರ ಪ್ರತೀಯೊಬ್ಬ ನಾಗರಿಕನಿಗೂ ಗೊತ್ತಿದೆ. ದೇಶದ ಭದ್ರತೆಯ ವಿಚಾರದಲ್ಲಿ ನಾವು ಎಡವಿದ್ದೇವೆ, ತಮಗಾಗದವರ ಮೇಲೆ ದಾಳಿ ನಡೆಸುವ ಮೂಲಕ ದ್ವೇಷ ಸಾಧಿಸುತ್ತಾ ಹೋದರೆ ದೇಶದಮುಂದಿನ ಪರಿಸ್ಥಿತಿಹೇಗಾಗಬಹುದು ಎಂಬುದನ್ನು ಜನ ಅರಿತುಕೊಳ್ಳಬೇಕುಎಂದು ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಕುಟುಂಬಕ್ಕೆ ಒಂದುಲಕ್ಷ ರೂ
ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಕುಟುಂಬಕ್ಕೆ ವಾರ್ಷಿಕ ಒಂದು ಲಕ್ಷ ಹಣವನ್ನು ಕೊಡುವ ಯೋಜನೆ ಇದೆ. ಕರ್ನಾಟಕ ಸರಕಾರದಿಂದ ಈಗಾಗಲೇ ವರ್ಷಕ್ಕೆ 25 ಸಾವಿರ ಕೊಡಲಾಗುತ್ತಿದೆ ಮುಂದೆ ಕೇಂದ್ರದಲ್ಲಿ ಅಧಿಕಾರ ಬಂದರೆ ಒಂದು ಲಕ್ಷ ಹಣ ಬರುತ್ತದೆ. ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷವಾಗಿದೆ .ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವ ಮೂಲಕ ದೇಶ ಮತ್ತು ಇಲ್ಲಿನ ಪ್ರಜೆಗಳನ್ನು ರಕ್ಷಿಸುವ ಕೆಲಸ ಆಗಬೇಕಿದೆ ಎಂದು ಶಾಸಕರು ಹೇಳಿದರು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ,ಕೆಪಿಸಿಸಿ ಕಾರ್ಯದರ್ಶಿ ಎಂಎಸ್ ಮಹಮ್ಮದ್,ಪುಡಾ ಅಧ್ಯಕ್ಷ ಭಾಸ್ಕರ ಕೋಡಿಂಬಾಳ,ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ವಿಟ್ಲ,ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಮುರಳೀಧರ್ ರೈ ಮಟಂತಬೆಟ್ಟು,ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್,ಉಸ್ತುವಾರಿ ಉಲ್ಲಾಸ್ ಕೋಟ್ಯಾನ್, ಡಿಸಿಸಿ ಕಾರ್ಯದರ್ಶಿ ನಝೀರ್ ಮಠ, ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು