Published
9 months agoon
By
Akkare Newsಹೊಸದಿಲ್ಲಿ: ಕರ್ನಾಟಕಕ್ಕೆ ನೀಡಬೇಕಿರುವ ಬರಪರಿಹಾರದ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಪ್ರತಿನಿತ್ಯ ಒಂದಲ್ಲ ಒಂದು ಸುಳ್ಳು ಹೇಳುತ್ತ ಬಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಅವರುಗಳಿಗೆ ಭಾರೀ ಮುಖಭಂಗವಾಗಿದೆ.
ರಾಜ್ಯ ಸರ್ಕಾರ ಬರಪರಿಹಾರದ ಹಣ ನೀಡದೇ ಇರುವುದರ ಕುರಿತು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಬರಪರಿಹಾರದಂಥ ವಿಷಯದಲ್ಲೂ ರಾಜ್ಯಗಳು ನ್ಯಾಯ ಕೇಳಿಕೊಂಡು ಸುಪ್ರೀಂ ಕೋರ್ಟ್ ಕದ ತಟ್ಟುವಂಥ ಸನ್ನಿವೇಶವನ್ನು ಯಾಕೆ ಸೃಷ್ಟಿಸಿದಿರಿ ಎಂದು ಚಾಟಿ ಬೀಸಿದೆ.
ಈ ಹಿನ್ನೆಲೆಯಲ್ಲ ಅಡ್ವೊಕೇಟ್ ಜನರಲ್ ಸೂಕ್ತ ಕ್ರಮ ಕೈಗೊಳ್ಳಲು ಎರಡು ವಾರಗಳ ಕಾಲಾವಕಾಶ ಕೋರಿದರು. ಎರಡು ವಾರಗಳೊಳಗೆ ಸಮಸ್ಯೆ ಇತ್ಯರ್ಥಗೊಳಿಸಬೇಕು, ತೆಗೆದುಕೊಂಡ ಕ್ರಮದ ಕುರಿತು ಮಾಹಿತಿ ನೀಡಬೇಕು ಎಂದು ಆದೇಶಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದಕ್ಕೆ ಹಾಕಿದೆ.
ನ್ಯಾ.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ಇಂದು ಆರಂಭಗೊಳ್ಳುತ್ತಿದ್ದಂತೆ, ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡದಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿಕೊಂಡರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮನವಿ. ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದರೆ ಅನಗತ್ಯ ಸುದ್ದಿಯಾಗಲಿದೆ ಎಂದು ತುಷಾರ್ ಬೇಡಿಕೊಂಡರು. ಈ ಹಿನ್ನೆಲೆಯಲ್ಲಿ ನೋಟಿಸ್ ನೀಡದ ಸುಪ್ರೀಂ ಕೋರ್ಟ್ ಎರಡು ವಾರಗಳೊಳಗೆ ಸಮಸ್ಯೆ ಬಗೆಹರಿಸುವ ಕುರಿತು ವಾಗ್ದಾನ ಪಡೆಯಿತು.