Published
9 months agoon
By
Akkare Newsಇಂದು (ಬುಧವಾರ ಏ10 )ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಬುಧವಾರ, ಏ10 ) ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ.
ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿ ಫಲಿತಾಂಶ ಸಿದ್ದವಾಗಿರುವ ಹಿನ್ನಲೆಯಲ್ಲಿ ಪ್ರಕಟಿಸುವ ಸಲುವಾಗಿ ಬುಧವಾರ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಬಳಿಕ 11 ಗಂಟೆಗೆ ವೆಬ್ಸೈಟ್ನಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ.
ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾ.1ರಿಂದ ಮಾರ್ಚ್ 22ರವರೆಗೆ ಪಿಯುಸಿ ಪರೀಕ್ಷೆಗಳು ನಡೆದಿದ್ದವು.