Published
9 months agoon
By
Akkare Newsಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ.
ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ನಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ.