ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ವಿಟ್ಲ ತಾಲೂಕಿನ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆPublished
9 months agoon
By
Akkare Newsಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ )ವಿಟ್ಲ ತಾಲೂಕಿನ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ ಯೋಜನಾ ಕಚೇರಿ ವಿಟ್ಲ ಇಲ್ಲಿ ಜರಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ ವಹಿಸಿದ್ದರು.ಜನಜಾಗ್ರಿ ವೇದಿಕೆಯ ವಿಟ್ಲ ವಲಯ ಅಧ್ಯಕ್ಷ ಕೃಷ್ಣಯ್ಯ ಬಲ್ಲಾಳ್, ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ವತಿಯಿಂದ ನಡೆಸುವ ಕಾರ್ಯಕ್ರಮಗಳ ಬಗ್ಗೆ 2024 -25 ನೇ ಸಾಲಿನ ಕ್ರಿಯಾಯೋಜನೆಯ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ 2024 ರ ಲೋಕಸಭಾ ಚುನಾವಣೆ ಮಧ್ಯ ಮುಕ್ತ ಚುನಾವಣೆ ನಡೆಸುವ ಸಲುವಾಗಿ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ಬಂಟ್ವಾಳ ತಾಲೂಕಿನಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ 2 ಯೋಜನಾ ಕಚೇರಿಗಳು ಇದ್ದು, ಈತನಕ ತಾಲೂಕಿಗೆ ಒಂದೇ ಜನಜಾಗೃತಿ ವೇದಿಕೆ ಇದ್ದು ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಗೆ ಪ್ರತ್ಯೇಕ ಜನಜಾಗೃತಿ ವೇದಿಕೆ ಅಸ್ತಿತ್ವಕ್ಕೆ ತರಬೇಕೆಂದು ಬೇಡಿಕೆಯನ್ನು ನಿರ್ಣಯಿಸಲಾಯಿತು. ನೂತನವಾಗಿ ವಿಟ್ಲ ಯೋಜನಾಧಿಕಾರಿ ಅಧಿಕಾರ ಸ್ವೀಕರಿಸಿದ ರಮೇಶ್, ರವರಿಗೆ ಜನಜಾಗ್ರತಿ ವೇದಿಕೆ ಹಾಗೂ ಕೇಂದ್ರ ಒಕ್ಕೂಟದ ವತಿಯಿಂದ ಹೂಗುಚ್ಚ ನೀಡಿ ಸ್ವಾಗತ ಕೋರಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಜನಜಾಗೃತಿ ವೇದಿಕೆಯ ಮಾಜಿ ತಾಲೂಕು ಅಧ್ಯಕ್ಷರಾದ ಕಿರಣ್ ಹೆಗ್ಡೆ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ನವೀನ್ ಚಂದ್ರ, ಯೋಜನೆಯ ಕಾನೂನು ಸಲಹೆಗಾರ ನಟೇಶ್ ವಿಟ್ಲ, ನೂತನವಾಗಿ ವಿಟ್ಲ ಯೋಜನಾಧಿಕಾರಿ ಅಧಿಕಾರ ಸ್ವೀಕರಿಸಿದ ರಮೇಶ್, ಮೊದಲಾದವರು ಉಪಸ್ಥಿತರಿದ್ದರು.
ಅಳಿಕೆ ವಲಯ ಮೇಲ್ವಿಚಾರಕಿ ಮಾಲತಿ ಪ್ರಾರ್ಥಿಸಿ, ಯೋಜನೆಯ ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದ ಸ್ವಾಗತಿಸಿ,ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲೆ ಎರಡರ ನಿರ್ದೇಶಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನಾಡಿ, ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ 2023 -24 ನೇ ಸಾಲಿನ ಸಾಧನ ವರದಿ ವಾಚಿಸಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ಯೋಜನಾ ಕಚೇರಿಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕ್ರಿಯಾಯೋಜನೆಯ ಬಗ್ಗೆ ಮಾಹಿತಿ ನೀಡಿ, ಸಾಲೆತ್ತೂರು ವಲಯ ಮೇಲ್ವಿಚಾರಕಿ ಮೋಹಿನಿ ವಂದಿಸಿ, ಮುಡಿಪು ವಲಯದ ಮೇಲ್ವಿಚಾರಕ ಗಂಗಾಧರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ಎಂಟು ವಲಯಗಳ ಜನಜಾಗ್ರತಿ ವೇದಿಕೆಯ ಅಧ್ಯಕ್ಷರುಗಳು, ಪದಾಧಿಕಾರಿಗಳು, ವಲಯಗಳ ಮೇಲ್ವಿಚಾರಕರು, ಉಪಸ್ಥಿತರಿದ್ದರು.