Published
9 months agoon
By
Akkare Newsಪುತ್ತೂರು: ದೇಶವನ್ನು ಆಳಿದ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿಯವರು ಕೇಳುತ್ತಿದ್ದು ದೇಶದಲ್ಲಿ ಸೂಜಿಯಿಂದ ವಿಮಾನದತನಕ ಅಭಿವೃದ್ದಿ ಮಾಡಿದ್ದು ಕಾಂಗ್ರೆಸ್ ಸರಕಾರ ಅದನ್ನು ಮಾರಾಟ ಮಾಡಿದ್ದುಮಾತ್ರ ಬಿಜೆಪಿ ಸಾಧನೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಮಾಣಿಲದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಏನೂ ಇರಲಿಲ್ಲ. ಬ್ರಿಟೀಷರು ದೇಶವನ್ನು ಕೊಳ್ಳೆ ಹೊಡೆದಿದ್ದರು. ಆ ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ 60 ವರ್ಷದಲ್ಲಿ ದೇಶದ ಜನತೆಗೆ ಏನು ಬೇಕೋ ಅದೆಲ್ಲವನ್ನೂ ಕೊಟ್ಟಿದೆ ಎಂಬ ಇತಿಹಾಸವನ್ನು ನಾವು ಮರೆಯಬಾರದು.
ಜೆಸಿಬಿ, ಹಿಟಾಚಿ ಇಲ್ಲದ ಕಾಲದಲ್ಲಿ ದೇಶದಲ್ಲಿ ಕೋಟಿಗಟ್ಟಲೆ ಕಿ ಮೀ ರೈಲ್ವೇ ಮಾರ್ಗ, ರಸ್ತೆಯನ್ನು ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಸರಕಾರವಾಗಿದೆ ಎಂಬುದು ಎಲ್ಲರೂ ಒಪ್ಪಿಕೊಳ್ಳುವ ಸತ್ಯವಲ್ಲವೇ? ಇಂದು ದೇಶದ ಜನತೆ ಮೂಲಭೂತ ಸೌರ್ಕರ್ಯ ಪಡೆದಿದ್ದರೆ ಅದು ಕಾಂಗ್ರೆಸ್ ಸಾಧನೆಯಾಗಿದೆ.
ಈ ದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದುಮನವಿ ಮಾಡಿದರು.
ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಮಾಣಿಲ ಗ್ರಾಪಂ ಅಧ್ಯಕ್ಷ ಶ್ರೀದರ್ ಫೂಜಾರಿ ಬಾಳೆಕಲ್ಲು, ಡಿಸಿಸಿ ಪ್ರ.ಕಾರ್ಯದರ್ಶಿ ಮುರಳೀದರ್ ರೈ ಮಟಂತಬೆಟ್ಟು, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ,ಜಯರಾಮ ಬಳ್ಲಾಲ್, ಮೊಯಿದಿನ್ ಕುಟ್ಟಿ, ಮೊದಲಾದವರು ಉಪಸ್ಥಿತರಿದ್ದರು.