Published
8 months agoon
By
Akkare Newsಮಾಣಿ – ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು ಮೃತಪಟ್ಟ ಘಟನೆಯೂ ನಡೆದಿತ್ತು. ಇಲ್ಲಿರುವ ಅಪಾಯಕಾರಿ ಧರೆಯನ್ನು ತೆರವು ಮಾಡಿ ವಾಹನ ಸಂಚಾರ ಗೋಚರಿಸುವಂತೆಬಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು.
ಸೋಶಿಯಲ್ ಮೀಡಿಯಾದಲ್ಲಿ ಶಾಸಕರಿಗೆ ಅನೇಕ ಮಂದಿ ಮನವಿ ಯನ್ನು ಮಾಡಿದ್ದರು.ಈಮನವಿಗೆ ಸ್ಪಂದಿಸಿದ ಶಾಸಕರು ಸ್ಥಳ ವೀಕ್ಷಣೆ ಮಾಡಿ ಅಫಾಯಕಾರಿಧರೆಯನ್ನು ತೆರವುಮಾಡುವಂತೆ ರಾ. ಹೆದ್ದಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಪ್ರಸಾದ್ ರವರಿಗೆ ಸೂಚನೆಯನ್ನು ನೀಡಿದ್ದಾರೆ. ಈ ಮೂಲಕ ಹಲವು ವರ್ಷಗಳ ಬೇಡಿಕೆಯೊಂದು ಓಡೇರಿದಂತಾಗಿದೆ.
ಇಲ್ಲಿರುವ ಅಪಾಯಕಾರಿ ಸನ್ನಿವೇಶವನ್ನು ತೆರವು ಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಮನವಿ ಮಾಡಿಕೊಂಡಿದ್ದರು.ಸ್ಥಳ ವೀಕ್ಷಣೆ ಮಾಡಿದ್ದೇನೆ.ಸುರಕ್ಷಿತ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಸೂಚನೆಯನ್ನು ನೀಡಿದ್ದೇನೆ. ಇನ್ನು ಇಲ್ಲಿ ಅಪಾಯ ಇಲ್ಲರುವುದಿಲ್ಲ ಅಶೋಕ್ ರೈ ಶಾಸಕರು,ಪುತ್ತೂರು