ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ಭಾರಿ ವಿರೋಧ, ಸುಳ್ಯದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಟಾಟಾ ಬೈಬೈ..!

Published

on

ಬಿಜೆಪಿಯೊಂದಿಗೆ ಜೆ.ಡಿ.ಎಸ್ ಮೈತ್ರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಸಾಮೂಹಿಕ ರಾಜೀನಾಮೆ ನೀಡಲು ಜೆಡಿಎಸ್ ಕಾರ್ಯಕರ್ತರು ನಿರ್ಧಾರಿಸಿದ್ದಾರೆ.40 ವರುಷಗಳಿಂದ ಜನತಾದಳ ಪಕ್ಷದಲ್ಲಿ ಜಾತ್ಯಾತೀತ ಸಿದ್ಧಾಂತ ಸಾಮಾಜಿಕ ನ್ಯಾಯದ ನಿಲುವಿಗೆ ಬದ್ಧರಾಗಿ ಪಕ್ಷದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿದ್ದ ಹಲವರು ಕಾರ್ಯಕರ್ತರು ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಗೆ ವಿರೋಧ ವ್ಯಕ್ತ ಪಡಿಸಿದ್ದಾರೆ.

ಜೊತೆಗೆ ಜಾತ್ಯಾತೀತ ಸಿದ್ದಾಂತಗಳ ನಂಬಿಕೆ ಇರುವ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿದ ಜೆಡಿಎಸ್ ಮುಖಂಡರು ಎನ್ ಡಿ ಎ ಒಕ್ಕೂಟದೊಂದಿಗೆ ಚುನಾವಣಾ ಮೈತ್ರಿ ಯನ್ನು ಮಾಡಿಕೊಂಡಿರುವುದನ್ನು ಒಪ್ಪಿಕೊಳ್ಳಲು ಅಸಾಧ್ಯವಾಗಿರುವುದರಿಂದ ಜನತಾದಳ ಜಾತ್ಯಾತೀತ ಪಕ್ಷದಲ್ಲಿ ತೊಡಗಿಸಿ ಕೊಳ್ಳಲು ನಮಗೆ ಅಸಾಧ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಸಮಾನಮನಸ್ಕರಾದ ನಾವೆಲ್ಲರೂ ಒಟ್ಟಾಗಿ ಜನತಾದಳ ಪಕ್ಷದ ಪ್ರಾಥಮಿಕ ಸದಸ್ಯತಕ್ಕೆ ಈ ದಿನ ರಾಜೀನಾಮೆ ಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ,ರಾಜ್ಯಧ್ಯಕ್ಷರಿಗೆ ಸಲ್ಲಿಸಿರುತ್ತೇವೆ ಎಂದಿದ್ದಾರೆ.







ಈಗಾಗಲೇ ನಮ್ಮನ್ನು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಜ್ಯಧ್ಯಕ್ಷರು ಕಾಂಗ್ರೆಸ್ ಪಕ್ಷಕ್ಕೆ, ಸೇರ್ಪಡೆಗೊಳ್ಳುವ ಆಹ್ವಾನವನ್ನು ನೀಡಿದ್ದಾರೆ, ಇಲ್ಲಿನ ಕಾಂಗ್ರೆಸ್ ಮುಖಂಡರೊಂದಿಗೆ ಮಾತುಕತೆ ನಡೆಸಿ ಸಾಮೂಹಿಕವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುವ ಬಗ್ಗೆ ನಿರ್ಧಾರಕ್ಕೆ ಬಂದಿದ್ದೇವೆ ಎಂದಿದ್ದಾರೆ. ಸುಳ್ಯ ನಗರ ಪಂಚಾಯತಿ ಸದಸ್ಯ ಕೆ ಎಸ್ ಉಮ್ಮರ್ ಮಾತನಾಡಿ , ಜಾತ್ಯತೀತ ನಿಲುವಿನಲ್ಲಿ ಇರುವ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಒಪ್ಪುವಂತಿದ್ದು ಶಾಂತಿ ಮತ್ತು ಸೌಹಾರ್ದಯುಕ್ತ ಭಾರತಕ್ಕಾಗಿ ಈ ಚುನಾವಣೆಯಲ್ಲಿ ಎಲ್ಲರೂ ಒಂದಾಗಬೇಕಾಗಿದೆ.

ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗುವ ದಿನದಂದು ನಾನು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದೇನೆ ಎಂದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಸುಳ್ಯ ಬ್ಲಾಕ್ ಉಪಾಧ್ಯಕ್ಷ ಹಾಜಿ ಉಮರ್ ಗೂನಡ್ಕ, ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಮುಖಂಡರುಗಳಾದ ಕೆ ಎ ಉಮ್ಮರ್ ಫಾರೂಕ್ ಕಳಂಜ, ಎನ್ ಇಸ್ಮಾಯಿಲ್ ಕಳಂಜ, ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ಎಬಿ ಮೋಹಿದೀನ್, ಉಪಾಧ್ಯಕ್ಷ ಇಬ್ರಾಹಿಂ ಕೊಳಂಬೆ, ಕಾರ್ಯದರ್ಶಿ ಖಾದರ್ ಮೊಟ್ಟೆಂಗರ್, ಮುಖಂಡರಾದ ಇಬ್ರಾಹಿಂ ಹಾಜಿ ಕತ್ತರ್ ಮಂಡೆಕೋಲು, ಕೆಎಂ ಮಹಮ್ಮದ್ ಹಾಜಿ ಬೆಳ್ಳಾರೆ ಮೊದಲಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement