ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಲಾಖಾ ಮಾಹಿತಿ

ಎ.17, 18: ಪುತ್ತೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಸೂಚನೆ

Published

on

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಎ.17 ಮತ್ತು 18ರಂದು ಪುತ್ತೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯ 26 ಮದ್ಯದಂಗಡಿಗಳನ್ನು ಮುಚ್ಚುವಂತೆ ಮತ್ತು ಈ ಸಮಯದಲ್ಲಿ ಎಲ್ಲಾ ವಿಧದ ಅಮಲು ಪದಾರ್ಥಗಳ ಮರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯದಂಗಡಿಗಳು ಮುಚ್ಚುವ ಕುರಿತು ಪೊಲೀಸರು ಅಧೀಕ್ಷಕರು ಮತ್ತು ಅಬಕಾರಿ ಉಪ ಆಯುಕ್ತರು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದರು.







ಅವರ ಪ್ರಸ್ತಾವನೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಅಗತ್ಯತೆಯನ್ನು ಮನಗಂಡು ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1) ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಎ.17 ರಂದು ಪೂರ್ವಾಹ್ನ ಗಂಟೆ 8 ರಿಂದ ಎ.18ರ ಮಧ್ಯರಾತ್ರಿ ಗಂಟೆ 12ರ ತನಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 26 ಮದ್ಯದಂಗಡಿಗಳನ್ನು ಮುಚ್ಚಲು ಮತ್ತು ಈ ಸಮಯದಲ್ಲಿ ಎಲ್ಲಾ ವಿಧದ ಅಮಲು ಪದಾರ್ಥಗಳ ಮಾರಾಟವನ್ನು ನಿಷೇಧಿಸಿ ಆದೇಶಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement