ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
8 months agoon
By
Akkare Newsಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.
ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ದ್ವಾರಕೀಶ್ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ್ದ ದ್ವಾರಕೀಶ್, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದ್ದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದ್ದರು.
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು.
ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಸಿನಿಮಾಗಳಲ್ಲಿ ತೆರೆಹಂಚಿಕೊಂಡಿದ್ದರು.