ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ವೇಗಕ್ಕೆ ಬಲ ತುಂಬಿದ ಕಾರ್ಯಕರ್ತರು, ಮುಖಂಡರು ಬಂಟ್ವಾಳ ವಿಧಾನಸಭಾ ಕ್ಷೇತ್ರಾದ್ಯಂತ ಮಿಂಚಿನ ಸಂಚಾರ ಕೈಗೊಂಡು, ಪ್ರಚಾರ ಕಾರ್ಯ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ನಿಮ್ಮ ಕಾವಲುಗಾರನಾಗಿ ನಾನಿರುವೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

Published

on

ಬಂಟ್ವಾಳ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.ಗುರುವಾರ ಬೆಳಗ್ಗಿನಿಂದಲೇ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧೆಡೆಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗಿಯಾದರು. ಅಂಗಡಿ – ಮಳಿಗೆ, ಮನೆಗಳಿಗೆ ತೆರಳಿ ಮತ ಯಾಚನೆ ನಡೆಸಿದರು.

ಅಭ್ಯರ್ಥಿ ತಮ್ಮ ಊರಿಗೆ ಬರುತ್ತಿದ್ದಂತೆ ಕಾರ್ಯಕರ್ತರು ಹೂ ಮಾಲೆ ಹಾಕಿ, ಶಾಲು ಹೊದಿಸಿ, ಇನ್ನೂ ಕೆಲವೆಡೆ ಪಟಾಕಿ ಸಿಡಿಸಿ ಬರಮಾಡಿಕೊಂಡರು. ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮತ ಯಾಚನೆ ಮಾಡುವಾಗ ಅವರ‌ ಜೊತೆ ತೆರಳಿ, ಅಭ್ಯರ್ಥಿ ವೇಗಕ್ಕೆ ಇನ್ನಷ್ಟು ಬಲ ತುಂಬಿದರು.






ಬಡಗ ಬೆಳ್ಳೂರು, ಅಮ್ಮುಂಜೆ – ಬಡಕಬೈಲು ಜಂಕ್ಷನ್, ಕಳ್ಳಿಗೆ – ಬ್ರಹ್ಮರಕೊಟ್ಲು, ಶೇಡಿಗುರಿ, ಬಾಳ್ತಿಲ, ಸೂರಿಕುಮೇರು, ಮಾಣಿ, ಬುಡೋಳಿ, ಪೆರ್ಲಾಪು- ಕಡೇಶ್ವಾಲ್ಯ, ನೇರಳಕಟ್ಟೆ, ಅನಂತಾಡಿ, ಮಂಗಿಲಪದವು, ಕಲ್ಲಡ್ಕ, ಅಮ್ಟೂರು, ಬೊಳ್ಳಾಯಿ, ಮಿತನಡ್ಕ, ಕನ್ಯಾನ, ಕೊಡುಂಗಾಯಿ, ಸಾಲೆತ್ತೂರು, ಬೋಳಂತೂರು, ಮಂಚಿ – ಕುಕ್ಕಾಜೆ ಜಂಕ್ಷನ್, ಸಜೀಪ ಮುನ್ನೂರು – ನಂದಾವರ ಜಂಕ್ಷನ್, ಪಾಣೆಮಂಗಳೂರು – ಮೆಲ್ಕಾರ್ ಜಂಕ್ಷನ್ ನಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಸಿದರು.

ಗೆಲುವಿಗೆ ನಾಂದಿ ಹಾಡಿ: ರಮಾನಾಥ ರೈ
ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಕಾಂಗ್ರೆಸ್ ಬಡವರ ಪರ ಕೆಲಸ ಮಾಡಿದ ಪಕ್ಷ. ಹಾಗಾಗಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದ ಅಗತ್ಯವಿದೆ. ಲೋಕಸಭಾ ಚುನಾವಣೆಯ ಗೆಲುವಿನ ಮೂಲಕ ಕಾಂಗ್ರೆಸ್’ನ ಗೆಲುವಿಗೆ ನಾಂದಿ ಹಾಡಿ ಎಂದರು.

ನಿಮ್ಮ ಕಾವಲುಗಾರನಾಗಿ ನಾನಿರುವೆ: ಪದ್ಮರಾಜ್ ಆರ್. ಪೂಜಾರಿ
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಮಾಡಿಕೊಂಡಿ ಬಂದಿದ್ದೇನೆ. ಮುಂದೆಯೂ ಇಂತಹ ಸಾಮಾಜಿಕ ಕೆಲಸವನ್ನು ಮುಂದುವರಿಸುತ್ತೇನೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರಕಾರ ಗ್ಯಾರೆಂಟಿ ಸಹಿತ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದನ್ನು ಮನೆಮನೆಗೆ ತಲುಪಿಸಿ. ಇದರೊಂದಿಗೆ ಉದ್ಯೋಗ ಸೃಷ್ಟಿಯ ಕೆಲಸವೂ ಜಿಲ್ಲೆಯಲ್ಲಿ ನಡೆಸಲಾಗುವುದು. ಮಾತ್ರವಲ್ಲ, ನಿಮ್ಮ ಸಮಸ್ಯೆಗಳ ಧ್ವನಿಯಾಗಿ ಸಂಸತ್ತಿನಲ್ಲಿ ಕೆಲಸ ಮಾಡುತ್ತೇನೆ. ಸಂಸತ್ ಸದಸ್ಯನಾಗಿ ನಿಮ್ಮ ಕಾವಲುಗಾರನಾಗಿ ಕೆಲಸ ನಿರ್ವಹಿಸುತ್ತೇನೆ ಎಂದರು.

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು: ಹರೀಶ್ ಕುಮಾರ್
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಬಡವರ ಪರವಾಗಿ ಇರುವ ಸರಕಾರ ಇಂದಿನ ಅಗತ್ಯ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬಂತೆ ಕಾಂಗ್ರೆಸ್ ಸರಕಾರ ಕೆಲಸ ಮಾಡುತ್ತಾ ಬಂದಿದೆ. ಮುಂದೆಯೂ ಬಡವರ ಬಗ್ಗೆ ಕಾಳಜಿ ವಹಿಸಲು, ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ದುಡಿಯಲು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.







ಧಾರ್ಮಿಕ ಕೇಂದ್ರಗಳಿಗೆ ಭೇಟಿ:
ಬೆಳಿಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮೊಡಂಕಾಪು ಚರ್ಚ್, ನರಿಕೊಂಬು ಹನುಮಾನ್ ಮಂದಿರ, ಮೊಗರ್ನಾಡು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನ, ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಚಂದ್ರಪ್ರಕಾಶ್ ಶೆಟ್ಟಿ, ಅಶ್ವನಿ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಸುದರ್ಶನ್ ಜೈನ್, ಸಂಜೀವ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಯೂತ್ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಸುರಯ್ಯ ಅಂಜುಮ್, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಕೊಳ್ನಾಡು ವಲಯ ಕಾಂಗ್ರೆಸ್ ಅಧ್ಯಕ್ಷ ಪವಿತ್ರ ಪೂಂಜಾ, ಉಪಾಧ್ಯಕ್ಷ ಅಬ್ದುಲ್ ರಜಾಕ್, ಅಬ್ದುಲ್ ಮಜೀದ್, ಜಿಪಂ ಮಾಜಿ ಸದಸ್ಯ ಕೃಷ್ಙ ನಾಯ್ಕ, ದೇವಕಿ, ಶಾಹುಲ್ ಹಮೀದ್, ಮೊಯಿದ್ದೀನ್, ಗಂಗಾಧರ, ವಸಂತ ಬೆಳ್ಚಾಡ, ಕೃ಼ಷ್ಣಯ್ಯ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement