Published
8 months agoon
By
Akkare Newsಮಂಗಳೂರು: ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.26 ರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ.