ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಏ.26 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ > ಆದೇಶದಲ್ಲಿ ಏನಿದೆ ?

Published

on

ಮಂಗಳೂರು: ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.26 ರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.








ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿರ್ಬಂಧಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version