ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ನೈಜ ವಿಚಾರ ತಿಳಿಸಲು ಸಾಮಾಜಿಕ ಜಾಲತಾಣ ಸದ್ಬಳಕೆ ಅವಶ್ಯ ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸಾಮಾಜಿಕ ಜಾಲತಾಣದ ಮೂಲಕ ಸರಕಾರದ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸುವ ಕೆಲಸ ಆಗಬೇಕು : ಸಾಮಾಜಿಕ ಜಾಲತಾಣ ಉಸ್ತುವಾರಿ ನವೀನ್ ಚೆಲ್ಯಡ್ಕPublished
8 months agoon
By
Akkare Newsಪುತ್ತೂರು: ನೈಜ ವಿಚಾರವನ್ನು ಜನರಿಗೆ ತಲುಪಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳಿ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.ಪುತ್ತೂರು ಮನೀಷಾ ಸಭಾಂಗಣದಲ್ಲಿ ಶನಿವಾರ ನಡೆದ ಚುನಾವಣಾ ಪ್ರಣಾಳಿಕೆ ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಗ್ಯಾರೆಂಟಿ ಸೇರದಂತೆ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ನಡೆಸುತ್ತಾ ಬಂದಿದೆ. ಯಾವತ್ತೂ ಕಾಂಗ್ರೆಸ್ ಅಪಪ್ರಚಾರ, ಸುಳ್ಳು ವಿಚಾರಗಳ ಹರಡಲೇ ಇಲ್ಲ. ಅದಕ್ಕೆ ಆಸ್ಪದವನ್ನು ನೀಡುವುದಿಲ್ಲ. ಕಾಂಗ್ರೆಸ್ ಸರಕಾರದ ಸಾಧನೆಗಳು ಬಹಳಷ್ಟಿವೆ. ಇವನ್ನು ಜನರಿಗೆ ತಿಳಿಸುವ ಕೆಲಸ ಸಮರ್ಥವಾಗಿ ಆಗಬೇಕಿದೆ ಎಂದರು.
ಶಾಸಕ ಅಶೋಕ್ ಕುಮಾರ್ ರೈ, ಚುನಾವಣಾ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರ. ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಕೆಪಿಸಿಸಿ ಸದಸ್ಯ ಐ.ಜಿ. ಚಿನ್ನಪ್ಪ,ಸಾಮಾಜಿಕ ಜಾಲತಾಣ ಉಸ್ತುವಾರಿ ಹಾಗೂ ಲೋಕಸಭಾ ಚುನಾವಣಾ ಉಸ್ತುವಾರಿ ನವೀನ್ ಚೆಲ್ಯಡ್ಕ.
ಸಾಮಾಜಿಕ ಜಾಲತಾಣ ರಾಜ್ಯ ವಕ್ತಾರೆ ಶೈಲಜಾ ಅಮರನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಕಾಶ್ ಪಾಣಾಜೆ, ಸಿದ್ದೀಕ್ ಸುಲ್ತಾನ್, ಮುರಳೀಧರ್ ರೈ ಮಠಂತಬೆಟ್ಟು, ವಿಕ್ರಮ್ ರೈ, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಪೂರ್ಣೇಶ್, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸಿನ ಸಾಮಾಜಿಕ ಜಾಲತಾಣ ಅಧ್ಯಕ್ಷ ಅಬ್ಬು ನವಗ್ರಾಮ ಉಪಸ್ಥಿತರಿದ್ದರು.