ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಗೆ ಬೃಹತ್ ಹೂಮಾಲೆಯ ಸ್ವಾಗತ

Published

on

ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ಅಬ್ಬಕ್ಕ ಸರ್ಕಲ್ ವರೆಗೆ ಕಾಂಗ್ರೆಸ್ ಬೃಹತ್ ರೋಡ್ ಶೋ ನಡೆಸಿತು.ತುಳು ಸೊಗಡಿನ ಹುಲಿ ಕುಣಿತ, ಗೊಂಬೆ ಕುಣಿತದೊಂದಿಗೆ ಅದ್ದೂರಿ ಮೆರವಣಿಗೆ ಸಾಗಿದರೆ ಅಭ್ಯರ್ಥಿ ಸೇರಿದಂತೆ ಪ್ರಮುಖರು ತೆರೆದ ವಾಹನದಲ್ಲಿ ನಿಂತು, ಮತದಾರರು, ಕಾರ್ಯಕರ್ತರತ್ತ ಕೈಬೀಸಿದರು.




ಮಲಯಾಳಕೋಡಿ ಶ್ರೀ ಮಲಯಾಳ ಚಾಮುಂಡಿ ಬಂಟ ಮುಂಡತ್ತಾಯ ದೈವಸ್ಥಾನ ಹಾಗೂ ಕೊಲ್ಯ ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿ, ರೋಡ್ ಶೋಗೆ ಚಾಲನೆ ನೀಡಲಾಯಿತು.



ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ ಬಳಿ ಕ್ರೇನ್ ಮೂಲಕ ಬೃಹತ್ ಹೂಮಾಲೆಯನ್ನು ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ‌ ಹಾಕಲಾಯಿತು. ನಂತರ ಅಬ್ಬಕ್ಕ ವೃತ್ತದವರೆಗೆ ರೋಡ್ ಶೋ ಮುಂದುವರಿಯಿತು.








ಮಾಜಿ ಸಿಎಂ ವೀರಪ್ಪ ಮೊಯಿಲಿ, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಸಿನಿಮಾ ನಟಿ ಕಾವ್ಯಾ ಶಾ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಾಜೀವ್ ಗಾಂಧಿ ವೈದ್ಯಕೀಯ ವಿವಿ ಸಿಂಡಿಕೇಟ್ ಸದಸ್ಯ ಯು.ಟಿ. ಇಫ್ತಿಕರ್ ಫರೀದ್, ಮಹಿಳಾ ಕಾಂಗ್ರೆಸ್ ಜಿಲ್ಲಾದ್ಯಕ್ಷೆ ಶಾರ್ಲೆಟ್ ಪಿಂಟೋ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳ್ಯಾರ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಪ್ರಮುಖರಾದ ಕೃಪಾ ಆಳ್ವಾ ಮೊದಲಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement