ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಾಮಾನ್ಯ ಸ್ಥಳೀಯ
ಕೇಂದ್ರ ಸರ್ಕಾರಕ್ಕೆ ಮುಖಭಂಗ ಕರ್ನಾಟಕಕ್ಕೆ ಬರ ಪರಿಹಾರ ನೀಡಲು ಅನುಮತಿ , ರೈತರಿಗೆ ಪರಿಹಾರ ಕೊಡಿಸುವ ನಮ್ಮ ಹೋರಾಟಕ್ಕೆ ಸಂದ ಜಯ: ಸಿಎಂ ಸಿದ್ದರಾಮಯ್ಯPublished
8 months agoon
By
Akkare Newsಬೆಂಗಳೂರು : ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಹೇಳಿದ್ದು, ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ ಎಂದು ಸಿಎಂ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ಬರ ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಕೂಡ ಸಮ್ಮತಿಸಿದೆ ಎಂದು ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು” ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಸಂಬಂಧ ಒಂದು ವಾರದೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಹೇಳಿದೆ. ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗ ಕೂಡ ಸಮ್ಮತಿಸಿದೆ ಎಂದು ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಬರಪರಿಹಾರಕ್ಕಾಗಿ ಮನವಿ ನೀಡಿ ಐದು ತಿಂಗಳುಗಳು ಕಳೆದರೂ ಕೇಂದ್ರ ಸರ್ಕಾರವು ಯಾವುದೇ ನಿರ್ಣಯ ಕೈಗೊಳ್ಳದೆ, ನ್ಯಾಯಾಲಯದ ಮೆಟ್ಟಿಲೇರುವಂತಹ ಅನಿವಾರ್ಯತೆಯನ್ನು ಸೃಷ್ಟಿಸಿತ್ತು. ಇದು ನಾಡಿನ ರೈತರಿಗೆ ಸಿಗಬೇಕಿದ್ದ ನ್ಯಾಯಯುತ ಪರಿಹಾರವನ್ನು ಕೊಡಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಹಂತದ ಜಯ.