ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ರೋಡ್ ಶೋ ರದ್ದು ಬದಲಿಗೆ ಬೂತ್ ಮಟ್ಟದಲ್ಲಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಸರಕಾರದ ಗ್ಯಾರಂಟಿ ಯೋಚನೆಯ ಬಗ್ಗೆ ಮನವರಿಕೆ ಹಾಗೂ ಮತಯಾಚನೆ: ಅಶೋಕ್ ಕುಮಾರ್ ನಾಳೆ ಏ (23) ಕಿಲ್ಲೆ ಮೈದಾನದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆPublished
1 year agoon
By
Akkare Newsಪುತ್ತೂರು: ಪುತ್ತೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಚುನಾವಣಾ ಪ್ರಚಾರ ರ್ಯಾಲಿಯನ್ನು ಸಾರ್ವಜನಿಕರ ಹಿತ ದೃಷ್ಟಿಯಿಂದ ಕೈ ಬಿಡಲಾಗಿದ್ದು ಅದರ ಬದಲಾಗಿ ಕಿಲ್ಲೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಬೃಹತ್ ರ್ಯಾಲಿ ನಡೆಸುವ ಯೋಜನೆಯನ್ನು ನಾವು ಹಾಕಿಕೊಂಡಿದ್ದೆವು. ರ್ಯಾಲಿ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕ ವಲಯದಿಂದ ನಮಗೆ ಮನವಿ ಬಂದ ಹಿನ್ನೆಲೆಯಲ್ಲಿ ರ್ಯಾಲಿಯನ್ನು ರದ್ದುಪಡಿಸಲಾಗಿದೆ.
ಏ.23ರಂದು ಸಂಜೆ 3 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಸಹಿತ ರಾಜ್ಯ ಹಾಗೂ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಲಿದ್ದು ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.