Published
8 months agoon
By
Akkare Newsಮಂಗಳೂರು: ಏಪ್ರಿಲ್ 26 ರಂದು ಲೋಕಸಭಾ ಚುನಾವಣಾ ಮತದಾನದ ಹಿನ್ನೆಲೆಯಲ್ಲಿ ಇಂದು ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆ ಬಳಿಕ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರು ಕ್ಷೇತ್ರದಲ್ಲಿ ಇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಮು ಸೂಚಿಸಿದ್ದಾರೆ.
ಸಂಜೆ 6 ಗಂಟೆ ಬಳಿಕ ರ್ಯಾಲಿ, ಬೀದಿ ಪ್ರಚಾರಗಳನ್ನು ಮಾಡುವಂತಿಲ್ಲ, ಅಲ್ಲದೇ ಇಂದು ಸಂಜೆ 6 ಗಂಟೆಯಿಂದ ಎಪ್ರಿಲ್ 26 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಮುಲೈ ಮುಗಿಲನ್ ತಿಳಿಸಿದ್ದಾರೆ.
ಇದಲ್ಲದೇ, ಖಾಸಗಿ ಕಾರ್ಯಕ್ರಮದ ನೆಪದಲ್ಲಿ ರಾಜಕೀಯ ಕಾರ್ಯಕ್ರಮ ಮಾಡಿದೇ ಕ್ರಮ ತೆಗೆದುಕೊಳ್ಳುವುದಾಗಿಯೂ ಜಿಲ್ಲಾ ಚುನಾವಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.