ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಲೋಕಸಭಾ ಚುನಾವಣೆ ಹಿನ್ನೆಲೆ , ಕಾರ್ಮಿಕರಿಗೆ ವೇತನ ಸಹಿತ ರಜೆಗೆ ಸೂಚನೆ ಸರಕಾರದ ಆದೇಶ

Published

on

ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡಲು ಅನುಕೂಲವಾಗಲೆಂದು ರಾಜ್ಯ ಸರ್ಕಾರವು ಸಾರ್ವತ್ರಿಕ ರಜೆ ಘೋಷಿಸಿಸಿದೆ.


ಈ ಕುರಿತು ಕಾರ್ಮಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ದಿನಾಂಕವನ್ನು 2024ರ ಮಾರ್ಚ್‌ 16ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿರುತ್ತದೆ ಎಂದು ಹೇಳಿದೆ.ಆದೇಶದಲ್ಲೇನಿದೆ?








ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement