Published
8 months agoon
By
Akkare Newsಪುತ್ತೂರು : ಶೃಂಗೇರಿ ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದರು.
ಶ್ರೀ ದೇವರ ದರ್ಶನ ಪಡೆದ ಬಳಿಕ ಅವರು ದೇವಸ್ಥಾನದ ಗರ್ಭಗುಡಿ ಬಳಿ ಇರುವ ಶಿಲಾ ಶಾಸನವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ನಿಕಟಪೂರ್ವ ಸದಸ್ಯರಾದ ಬಿ.ಐತ್ತಪ್ಪ ನಾಯ್ಕ, ರಾಮದಾಸ್ ಗೌಡ, ಅಂಬಿಕಾ ಮಹಾವಿದ್ಯಾಲಯದ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ನ್ಯಾಯವಾದಿ ಮಹೇಶ್ ಕಜೆ, ದಿನೇಶ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.